ಪಣಜಿ: ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಪ್ರಮೋದ್ ಸಾವಂತ್ ಅವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಖಚಿತ ಪಡಿಸಿದ್ದಾರೆ.
I wish to inform all that I have been detected COVID19 positive. I am asymptomatic and hence have opted for home isolation. I shall continue to discharge my duties working from home. Those who have come in my close contact are advised to take the necessary precautions.
— Dr. Pramod Sawant (@DrPramodPSawant) September 2, 2020
ನನಗೆ ಕೋವಿಡ್-19 ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದರೆ ಯಾವುದೇ ರೋಗಲಕ್ಷಣಗಳು ಇಲ್ಲದೇ ಇರುವ ಕಾರಣ ಮನೆಯಲ್ಲಿಯೇ ಐಸೊಲೇಶನ್ ನಲ್ಲಿ ಇರುತ್ತೇನೆ. ಮನೆಯಲ್ಲಿ ಇದ್ದುಕೊಂಡು ಕೆಲಸ ನಿರ್ವಹಿಸುತ್ತೇನೆ. ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದವರು ಅಗತ್ಯ ಕ್ರಮ ಕೈಗೊಳ್ಳಿ ಎಂದು ಪ್ರಮೋದ್ ಸಾವಂತ್ ಟ್ವೀಟ್ ಮಾಡಿದ್ದಾರೆ.