ಮಂಗಳೂರು: ಫೆಬ್ರವರಿ 14 ರಂದು ನಡೆಯುವ ಪ್ರೇಮಿಗಳ ದಿನಾಚರಣೆಗೆ ಅಡ್ಡಿಯಾಗದಂತೆ ಜನರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಎಚ್ಚರಿಗೆ ನೀಡಿದ್ದಾರೆ.
ಕೆಲವು ಸಂಸ್ಥೆಗಳು ಸಾಮಾಜಿಕ ಮಾಧ್ಯಮ ತಾಣಗಳಲ್ಲಿ ಎಚ್ಚರಿಕೆ ನೀಡಿದ ನಂತರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿ ಕುಮಾರ್ ಮಧ್ಯಪ್ರವೇಶಿಸಿದ್ದಾರೆ. ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸಿ, ಕೆಲವು ಸಂಸ್ಥೆಗೆ ಸೇರಿದ ಪ್ರೇಮಿಗಳ ದಿನವನ್ನು ಆಚರಣೆ ಮಾಡದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಎಚ್ಚರಿಕೆ ನೀಡಿದ್ದರು. ಇದು ಭಾರತೀಯ ಆಚರಣೆಯಲ್ಲ ಎಂದು ಹೇಳಿದ್ದಾರೆ.
ಈ ರೀತಿ ಸಂದೇಶವನ್ನು ಪ್ರಸಾರ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ನಾವು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದೇವೆ. ಅವರ ವಿರುದ್ಧ ‘ಬೈಂಡ್ ಓವರ್’ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಹಾಗೂ ಪ್ರೇಮಿಗಳ ದಿನಾಚರಣೆ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಈ ಬಗ್ಗೆ ಜಾಗ್ರತೆ ವಹಿಸಲಿದ್ದಾರೆಂದು ಹೇಳಿದರು.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ಇದನ್ನು ತಡೆಗಟ್ಟುವ ಕ್ರಮವಾಗಿ ನಾವು ಫೆಬ್ರವರಿ 14 ರಂದು ಕಡಲತೀರಗಳು, ಮಾಲ್ಗಳು, ಹೋಟೆಲ್ಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.