ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಅಧಿಕಾರ ಸ್ವೀಕರಿಸಿದ ಯುಪಿಎಸ್‌ಸಿ ಟಾಪರ್

0
84

ಬಳ್ಳಾರಿ: 2016ರ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದ ರಾಜ್ಯ ನಂದಿನಿ ಕೆ.ಆರ್. ಅವರು, ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್‍ನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೆ ಟಾಪರ್ ಆಗಿ ಉತ್ತೀಣರಾಗಿದ್ದರು. ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರೋದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

ಇದನ್ನೂ ನೋಡಿ : ಯುಪಿಎಸ್‌ಸಿ 2020 – ರಾಜ್ಯದಿಂದ ತೇರ್ಗಡೆಯಾದ ಅಭ್ಯರ್ಥಿಗಳ ಪಟ್ಟಿ

ನಂದಿನಿ ಅವರು ಬಳ್ಳಾರಿ ಜಿಲ್ಲಾ ಸಿಇಒ ಹುದ್ದೆ ಪಡೆದಿರುವುದು, ಜಿಲ್ಲಾ ಪಂಚಾಯಿತಿಗೆ ಹೆಮ್ಮೆಯ ಸಂಗತಿಯಾಗಿದೆ. ಈ ಹಿಂದೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕೆ.ನಿತೀಶ್ ಅವರು ಆಯ್ಕೆಯಾಗಿದ್ದರು. ನಿತೀಶ್ ಅವರ ಹಿಂದೆ ಸಿಇಓ ಆಗಿದ್ದ ಡಾ.ಕೆ.ವಿ.ರಾಜೇಂದ್ರ ಅವರ ಕಾರ್ಯವೈಖರಿ ಜನಮನ್ನಣೆ ಗಳಿಸಿತ್ತು. ಇದೀಗ ನಂದಿನಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here