ಕಾಸರಗೋಡಿಗೆ ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದ ಒಪ್ಪಿಗೆಗೆ ಕಾಯುತ್ತಿದೆ ದ.ಕ ಜಿಲ್ಲಾಡಳಿತ

0
199
Tap to know MORE!

ಮಂಗಳೂರು: ಕಾಸರಗೋಡಿನ ಜಿಲ್ಲಾಡಳಿತವು ದಕ್ಷಿಣ ಕನ್ನಡಕ್ಕೆ, ಅಂತರ ರಾಜ್ಯ ಬಸ್ಸುಗಳನ್ನು ಓಡಿಸಲು ಸಜ್ಜಾಗಿದೆ. ಆದರೆ ಕರ್ನಾಟಕದ ಕರಾವಳಿ ಜಿಲ್ಲೆಯು ಮಂಗಳೂರು ಮತ್ತು ಕಾಸರಗೋಡು ನಡುವಿನ ಬಸ್ ಸಂಚಾರ ಪುನರಾರಂಭಿಸಲು ರಾಜ್ಯ ಸರ್ಕಾರದ ಅನುಮೋದನೆಗಾಗಿ ಕಾಯುತ್ತಿದೆ.

ತಲಪಾಡಿ ಮೂಲಕ ಕಾಸರಗೋಡಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗಳನ್ನು ಓಡಿಸಲು ಅನುಮೋದನೆ ಕೋರಿ ಜಿಲ್ಲಾಡಳಿತವು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಹೇಳಿದ್ದಾರೆ.

ಇದನ್ನೂ ನೋಡಿ : ಮಂಗಳೂರಿಗೆ ಬಸ್ ಹೊರಡಿಸಲು ಕಾಸರಗೋಡು ಜಿಲ್ಲಾಡಳಿತ ಅನುಮತಿ

“ಇದು ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕಾದ ನಿರ್ಧಾರ. ಹೀಗಾಗಿ ಮಂಗಳೂರು ಮತ್ತು ಕಾಸರಗೋಡು ನಡುವೆ ಕೆಎಸ್‌ಆರ್‌ಟಿಸಿ ಸೇವೆಗಳನ್ನು ಪ್ರಾರಂಭಿಸಲು ಅನುಮೋದನೆ ಕೋರಿ ನಾವು ಮನವಿಿಯನ್ನು ಕಳುಹಿಸುತ್ತೇವೆ ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೆಪ್ಟೆಂಬರ್ 21 ರಿಂದ ತಲಪಾಡಿ ಮೂಲಕ ಮಂಗಳೂರು ಮಾರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕಾಸರಗೋಡು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ. ಕೋವಿಡ್ -19 ಕೋರ್ ಸಮಿತಿ ಸಭೆಯಲ್ಲಿ ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ, ಅಲ್ಲಿನ ಜಿಲ್ಲಾಡಳಿತವು ಪ್ರತಿ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು 40 ಕ್ಕೆ ಸೀಮಿತಗೊಳಿಸಲು ನಿರ್ಧರಿಸಿದೆ.

ಕಾಸರಗೋಡಿನಲ್ಲಿ ಹೆಚ್ಚಿನ ಸಂಖ್ಯೆಯ ಜನರು ವೈದ್ಯಕೀಯ ಚಿಕಿತ್ಸೆಗಾಗಿ ಮಂಗಳೂರಿಗೆ ಭೇಟಿ ನೀಡುತ್ತಾರೆ ಮತ್ತು ಅನೇಕರು ಪ್ರತಿದಿನದ ಕೆಲಸಕ್ಕಾಗಿ ಮಂಗಳೂರಿನ ಮೇಲೆ ಅವಲಂಬಿತರಾಗಿದ್ದಾರೆ. ಇದರ ಪರಿಣಾಮವಾಗಿ, ಕಾಸರಗೋಡಿನ ಜನಸಂಖ್ಯೆಯ ಬಹುದೊಡ್ಡ ಭಾಗವು ಕೆಎಸ್‌ಆರ್‌ಟಿಸಿ ಬಸ್‌ಗಳ ಕಾರ್ಯಾಚರಣೆಯ ಪುನರಾರಂಭಕ್ಕಾಗಿ ಕುತೂಹಲದಿಂದ ಕಾಯುತ್ತಿದೆ.

ಬಸ್ ಮಾರ್ಚ್‌ನಲ್ಲಿ ಲಾಕ್‌ಡೌನ್ ಜಾರಿಗೊಳಿಸಿದ ನಂತರ ಸ್ಥಗಿತಗೊಳಿಸಲಾಗಿದೆ. ಸದ್ಯಕ್ಕೆ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ನಡುವೆ ಖಾಸಗಿ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ.

LEAVE A REPLY

Please enter your comment!
Please enter your name here