ಬಾಬ್ರಿ ಧ್ವಂಸ ಪ್ರಕರಣ : ತೀರ್ಪು ಪ್ರಕಟಿಸಲು ಮುಹೂರ್ತ ಫಿಕ್ಸ್!

0
191
Tap to know MORE!

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು, ಸಿಬಿಐ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 30 ರಂದು ಪ್ರಕಟಿಸಲಿದ್ದಾರೆ. ತೀರ್ಪಿನ ವಿಚಾರಣೆಗಾಗಿ ಎಲ್ಲಾ ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಧೀಶ ಎಸ್.ಕೆ. ಯಾದವ್ ಅವರು 28 ವರ್ಷಗಳ ಹಳೆಯ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಸೆಪ್ಟೆಂಬರ್ 30ಕ್ಕೆ ಪ್ರಕಟಿಸುವುದಾಗಿ ಬುಧವಾರ ತಿಳಿಸಿದ್ದು, ಅಂದು ಎಲ್ಲಾ 32 ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿದ್ದಾರೆ.

ಈ ಪ್ರಕರಣದಲ್ಲಿ ಮಾಜಿ ಉಪ ಪಿಎಂ ಎಲ್.ಕೆ.ಅಡ್ವಾಣಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳಿದ್ದಾರೆ.

ಸೆಪ್ಟೆಂಬರ್ 1 ರಂದು ವಾದ-ಪ್ರತಿವಾದ ಮುಕ್ತಾಯಗೊಂಡಿದ್ದು, ನಂತರ ವಿಶೇಷ ನ್ಯಾಯಾಧೀಶರು ತೀರ್ಪು ಬರೆಯಲು ಪ್ರಾರಂಭಿಸಿದರು ಎಂದು ಸಿಬಿಐ ವಕೀಲ ಲಲಿತ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here