“ಬಾಬ್ರಿ ಧ್ವಂಸ ಪ್ರಕರಣ ಪೂರ್ವ ನಿಯೋಜಿತವಲ್ಲ” – ಆರೋಪಿಗಳನ್ನು ಖುಲಾಸೆ ಮಾಡಿದ ನ್ಯಾಯಾಲಯ”

0
171
Tap to know MORE!

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಬಗ್ಗೆ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ತನ್ನ ತೀರ್ಪು ನೀಡಿದ್ದು, ಮಸೀದಿಯ ಧ್ವಂಸವು ಪೂರ್ವ ನಿಯೋಜಿತವಲ್ಲ ಎಂದಿದೆ. ಎಲ್.ಕೆ.ಅಡ್ವಾಣಿ, ಎಂ.ಎಂ.ಜೋಶಿ ಮತ್ತು ಉಮಾ ಭಾರತಿ ಸೇರಿದಂತೆ ಎಲ್ಲ 32 ಆರೋಪಿಗಳನ್ನು ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿದೆ.

ಬಾಬರಿ ಮಸೀದಿ ಧ್ವಂಸ ಮಾಡಿದ್ದು ಪೂರ್ವನಿಯೋಜಿತ ಎಂದು ಅನಿಸುವುದಕ್ಕೆ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಎಲ್ಲಾ 32 ಆರೋಪಿಗಳನ್ನ ಖುಲಾಸೆಗೊಳಿಸಿದೆ. ಲಕ್ನೋ ವಿಶೇಷ ತನಿಖಾ ದಳದ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠ ಇಂದು 2 ಸಾವಿರ ಪುಟಗಳ ತೀರ್ಪನ್ನು ಪ್ರಕಟಿಸಿದೆ.

ಬಾಬರಿ ಮಸೀದಿ ಧ್ವಂಸ ಪ್ರಕರಣದ ತೀರ್ಪನ್ನು ಓದುವಾಗ ಈ ಕೃತ್ಯದಲ್ಲಿ ಯಾವುದೇ ಪಿತೂರಿ ಇಲ್ಲ ಎಂದು ನ್ಯಾಯಾಧೀಶರು ಹೇಳಿದರು. ಬಾಬರಿ ಮಸೀದಿ ನೆಲಸಮವಾದ 28 ವರ್ಷಗಳ ನಂತರ, ಸಿಬಿಐ ನ್ಯಾಯಾಲಯವು ಈ ಪ್ರಕರಣದ ಎಲ್ಲ 32 ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಬಾಬ್ರಿ ಮಸೀದಿ ಉರುಳಿಸುವಿಕೆಯ ಪ್ರಕರಣದ ಪ್ರಮುಖ ಆರೋಪಿಗಳಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಮತ್ತು ಮಹಂತ್ ನೃತ್ಯಗೋಪಾಲ್ ದಾಸ್ ತೀರ್ಪು ನೀಡುವ ಸಮಯದಲ್ಲಿ ನ್ಯಾಯಾಲಯಕ್ಕೆ ಗೈರುಹಾಜರಾಗಿದ್ದರು. ಪ್ರಕರಣದ ಒಟ್ಟು 26 ಆರೋಪಿಗಳು ಬುಧವಾರ ಸಿಬಿಐ ನ್ಯಾಯಾಲಯಕ್ಕೆ ಹಾಜರಾಗಿದ್ದರು.

LEAVE A REPLY

Please enter your comment!
Please enter your name here