ಜಾರ್ಖಂಡ್:ಇತ್ತೀಚಿಗೆ ಕಬ್ಬಿನ ಗದ್ದೆಯಲ್ಲಿ ಅಪ್ರಾಪ್ತೆಯೋರ್ವಳ ಮೇಲೆ ಅತ್ಯಾಚಾರ ನಡೆಸಿ ಭೀಕರ ಹತ್ಯೆ ಮಾಡಿದ ಬೆನ್ನಲ್ಲೇ ಇದೀಗ ದೇಶವನ್ನೇ ಬೆಚ್ಚಿ ಬೀಳಿಸುವ ಮತ್ತೊಂದು ಘಟನೆ ನಡೆದಿದೆ. ಮಾತು ಬರದ ಹಾಗೂ ಕಿವಿ ಕೇಳದ ಬಾಲಕಿಯ ಮೇಲೆ ಅತ್ಯಾಚಾರಗೈದು ಕೊಲೆ ಮಾಡಿರುವ ಘಟನೆ ಜಾರ್ಖಂಡ್ ರಾಜ್ಯದ ಗೊಡ್ಡಾ ಜಿಲ್ಲೆಯ ಮಹಾಗಾಮಾದಲ್ಲಿ ನಡೆದಿದೆ.
ಶನಿವಾರ ರಾತ್ರಿಯಿಂದ ಕಾಣೆಯಾಗಿದ್ದ ಬಾಲಕಿಗಾಗಿ ಹುಡುಕಾಟ ನಡೆಸಿದ ಕುಂಟುಂಬಸ್ಥರಿಗೆ ,ಮಾರನೇ ದಿನ ಬಾಲಕಿಯ ಶವ ಗ್ರಾಮದ ಶಾಲೆಯ ಕೊಠಡಿ ಬಳಿ ಬಾಲಕಿ ಶವ ಪತ್ತೆಯಾಗಿದೆ.ತಲೆಯ ಭಾಗದಲ್ಲಿ ಗಾಯಗಳಾಗಿದ್ದು, ಇಟ್ಟಿಗೆಯಿಂದ ಜಜ್ಜಿ ಕೊಲೆಮಾಡಲಾಗಿದೆ.ಘಟನಾ ಸ್ಥಳಕ್ಕೆ ಮೆಹ್ರಾಮ್ ಠಾಣೆ ಪೋಲಿಸರು ಆಗಮಿಸಿ ತನಿಖೆ ನಡೆಸಿದ್ದಾರೆ.
[…] […]