ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವಿಟ್ಟರ್ ಖಾತೆ ಸ್ಥಗಿತ!

0
147
Tap to know MORE!

ಮುಂಬೈ(ಮೇ.04): ಸೋಶಿಯಲ್ ಮೀಡಿಯಾದಲ್ಲಿ ಬಹಳಷ್ಟು ಸಕ್ರಿಯರಾಗಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್ ಟ್ವಿಟರ್‌ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರದಂದು ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಇದರ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. ಹೀಗಿರುವಾಗ ನಟಿ ಕಂಗನಾ ಸರಣಿ ಟ್ವೀಟ್ ಮಾಡಿದ್ದರು ಎಂಬುವುದು ಉಲ್ಲೇಖನೀಯ.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಬಹುಮತ ಗಳಿಸಿತ್ತು. ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ರಾಜ್ಯದಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಕಂಗನಾ ರಣಾವತ್ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ಟ್ವೀಟ್ ಮಾಡಿದ್ದರು. ಇದು ಭಾರೀ ವಿವಾದ ಸೃಷ್ಟಿಸಿತ್ತು.

ಇದನ್ನೂ ಓದಿ: ಮುಂದಿನ 5 ವರ್ಷಗಳಲ್ಲಿ ಬಿಜೆಪಿಯು ತಮಿಳುನಾಡಿನಲ್ಲಿ ಬದಲಾವಣೆ ತರದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಅಣ್ಣಾಮಲೈ

ಅಲ್ಲದೇ ಕಂಗನಾ ಖಾತೆ ನಿಷ್ಕ್ರಿಯಗೊಳಿಸುವ ಕೆಲ ನಿಮಿಷದ ಹಿಂದಷ್ಟೇ ನಟಿ ಭಾವನಾತ್ಮಕ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ನಲ್ಲಿ ಪಶ್ಚಿಮ ಬಂಗಾಳ ಹಿಂದಸಾಚಾರದ ಬಗ್ಗೆ ಮಾತನಾಡಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಸದ್ಯ ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಟ್ವಿಟರ್ ನಿಯಮ ಉಲ್ಲಂಘಿಸಿದ ಆರೋಪದಡಿ ಅವರ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ.

LEAVE A REPLY

Please enter your comment!
Please enter your name here