BIG NEWS| ಜೂನ್ 21 ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ, ಮೆಟ್ರೋ ಸಂಚಾರ ಆರಂಭ

0
149
Tap to know MORE!

ಬೆಂಗಳೂರು(ಜೂ.17): ಸದ್ಯ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿದೆ. ಹೀಗಾಗಿ ಜೂನ್​ 14ರಿಂದ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಮೊದಲನೇ ಹಂತದ ಅನ್​ಲಾಕ್​ ಜಾರಿಗೊಳಿಸಲಾಗಿದ್ದು, ಕೆಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಲಾಗಿದೆ. ಜೂನ್ 21ರಿಂದ 2ನೇ ಹಂತದ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಲಿದೆ. ​ ಆಗ ಇನ್ನೂ ಹೆಚ್ಚಿನ ವಿನಾಯಿಯಿ ಸಿಗುತ್ತೆ ಎನ್ನಲಾಗುತ್ತಿದೆ.

ಜೂನ್‌ 21 ರಿಂದ ರಾಜ್ಯಾದ್ಯಂತ ಅನ್ಲಾಕ್ ಜಾರಿಗೊಳಿಸಲು ತಾಂತ್ರಿಕ ಸಲಹಾ ಸಮಿತಿ ಸೂಚನೆ| ಯಾವುದಕ್ಕೆಲ್ಲ ಅನುಮತಿ?

ಜೂನ್​​ 21ರಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​ಗಳು ಸಂಚಾರ ಆರಂಭಿಸಲಿವೆ. ಸದ್ಯ ರಾಜ್ಯ ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಜೊತೆಗೆ ಮೊದಲ ಹಂತದ ಅನ್​ಲಾಕ್​ ಕೂಡ ಮಾಡಲಾಗಿದೆ. ಇದೇ ಸೋಮವಾರದಿಂದ ಎರಡನೇ ಹಂತದ ಅನ್​ಲಾಕ್​ ಪ್ರಕ್ರಿಯೆ ಆರಂಭವಾಗಲಿದೆ. ಅಂದಿನಿಂದ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಏನೆಲ್ಲಾ ಷರತ್ತುಗಳೊಂದಿಗೆ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಲು ಬಿಬಿಎಂಪಿ ಮುಂದಾಗಿದೆ ಎಂದರೆ,

  • ಶೇಕಡಾ 50ರಷ್ಟು ಬಸ್ಸುಗಳನ್ನ ಮಾತ್ರ ರಸ್ತೆಗಿಳಿಸಲು ಅನುಮತಿ.
  • ಬಸ್ಸುಗಳಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ.
  • ಮಾಸ್ಕ್,‌ ಸಾಮಾಜಿಕ ಅಂತರ ಕಡ್ಡಾಯ.
  • ಬಸ್ಸುಗಳಲ್ಲಿ ಒಂದು ಆಸನ ಬಿಟ್ಟು ಒಂದು ಆಸನದಲ್ಲಿ ಕುಳಿತು ಪ್ರಯಾಣಿಸಲು ಅವಕಾಶ.
  • ನಿಂತುಕೊಂಡು ಪ್ರಯಾಣಿಸೋದಕ್ಕೆ ಅವಕಾಶ ಇಲ್ಲ
  • ಬಸ್​​ ನಿಲ್ದಾಣಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳುವ ಜವಬ್ದಾರಿ ಪೊಲೀಸ್​ ಇಲಾಖೆ ಮತ್ತು ಬಿಎಂಟಿಸಿ ಅಧಿಕಾರಿಗಳಿಗೆ.
  • ಮೆಜೆಸ್ಟಿಕ್, ಟರ್ಮಿನಲ್ಸ್, ಪ್ರಮುಖ ಬಸ್​ ನಿಲ್ದಾಣಗಳಲ್ಲಿ ಕೋವಿಡ್​ ಟೆಸ್ಟ್​ ಕಡ್ಡಾಯ.
  • ನೈಟ್ ಕರ್ಫ್ಯೂ ಆರಂಭಕ್ಕೂ ಮುನ್ನ 7 ಗಂಟೆ ಒಳಗೆ ಬಸ್​ ಸಂಚಾರ ನಿಲ್ಲಿಸಬೇಕು.

ಅನ್​​ಲಾಕ್​ ಆದ ಬಳಿಕ ಬಿಎಂಟಿಸಿ ಟಿಕೆಟ್​ ದರ ಏರಿಕೆ ಆಗುತ್ತದೆ ಎಂಬ ಸುದ್ದಿ ಕೇಳಿ ಬಂದಿತ್ತು. ಈ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ಕೂಡ ನೀಡಿದ್ದರು. ಟಿಕೆಟ್​ ದರದಲ್ಲಿ ಯಾವುದೇ ಏರಿಕೆ ಇಲ್ಲ. ಅಧಿಕಾರಿಗಳು ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಿತ್ತು. ಬಡವರು ಈಗಾಗಲೇ ಸಂಕಷ್ಟದಲ್ಲಿದ್ದಾರೆ. ಅವರ ಮೇಲೆ ಮತ್ತೆ ಹೊರೆ ಹಾಕುವುದಿಲ್ಲ. ಟಿಕೆಟ್​ ದರ ಏರಿಕೆ ಮಾಡಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದರು.

LEAVE A REPLY

Please enter your comment!
Please enter your name here