ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಮರಳಿ ಟಿಎಂಸಿ ಸೇರ್ಪಡೆ!

0
208
Tap to know MORE!

ಕೋಲ್ಕತ್ತಾ, ಜೂನ್ 11: ಟಿಎಂಸಿ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಮುಖುಲ್ ರಾಯ್ ಮತ್ತೆ ಟಿಎಂಸಿಗೆ ಸೇರ್ಪಡೆಯಾಗಿದ್ದು ಎಲ್ಲರಲ್ಲೂ ಆಶ್ಚರ್ಯವನ್ನುಂಟುಮಾಡಿದೆ.

ಮುಕುಲ್ ರಾಯ್ ಬಿಜೆಪಿಯಿಂದ ಟಿಎಂಸಿಗೆ ಮರಳಿದ ಮೊದಲ ವ್ಯಕ್ತಿಯಾಗಿದ್ದರು. ಇದೀಗ ಅವರು ಪುತ್ರ ಶುಭ್ರಾಂಶು ಜತೆ ಟಿಎಂಸಿಗೆ ಮರಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಆಪರೇಷನ್ ಘರ್‌ವಾಪಸಿ ಇದೀಗ ಶುರುವಾಗಿದೆ, ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿ ಬಿಜೆಪಿಯಿಂದ ಮತ್ತೆ ತೃಣಮೂಲ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುಳಿವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿದ್ದಾರೆ.

ಕಾಂಗ್ರೆಸ್ ನಾಯಕ, ಅನುಭವಿ ರಾಜಕಾರಣಿ ಜಿತಿನ್ ಪ್ರಸಾದ ಬಿಜೆಪಿಗೆ ಸೇರ್ಪಡೆ

ಮುಕುಲ್ ರಾಯ್ ತೃಣಮೂಲ ಕಾಂಗ್ರೆಸ್‌ನ ಸಂಸ್ಥಾಪನಾ ಸದಸ್ಯರಾಗಿದ್ದಾರೆ, ಅವರು ಟಿಎಂಸಿ ತೊರೆಯುವ ಸಂದರ್ಭದಲ್ಲಿ ಜನರಲ್ ಸೆಕ್ರೆಟರಿಯಾಗಿದ್ದರು. ಇದೀಗ ಆ ಹುದ್ದೆಯು ಮಮತಾ ಬ್ಯಾನರ್ಜಿ ಅಳಿಯ ಅಭಿಷೇಕ್ ಬ್ಯಾನರ್ಜಿ ಬಳಿ ಇದೆ.

LEAVE A REPLY

Please enter your comment!
Please enter your name here