ಬಿಡುವಿಲ್ಲದೆ ಕೆಲಸ ಮಾಡುತ್ತಿರುವ ಕೊರೋನಾ ಸೇನಾನಿಗಳಿಗೆ ನೈತಿಕ ಸ್ಪೂರ್ತಿ ತುಂಬಿದ ಸಚಿವ ಡಾ| ಸುಧಾಕರ್

0
188
Tap to know MORE!

ನಂಜನಗೂಡಿನ ಆರೋಗ್ಯಾಧಿಕಾರಿಯವರ ಆತ್ಮಹತ್ಯೆ ಘಟನೆ ಬಳಿಕ ಪ್ರತಿಕ್ರಿಯಿಸಿದ ಸಚಿವ ಡಾ| ಕೆ.ಸುಧಾಕರ್, ಕೋವಿಡ್‌ ನಿಯಂತ್ರಿಸುವಲ್ಲಿ ಬಿಡುವಿಲ್ಲದೇ ಹಗಲಿರುಳು ಶ್ರಮಿಸುತ್ತಿರುವ ನಮ್ಮ ಎಲ್ಲಾ ಕೋವಿಡ್‌ ವಾರಿಯರ್ಸ್‌ಗಳಿಗೆ ನಾನು ಈ ಮೂಲಕ ತಿಳಿಸುವುದೇನಂದರೆ ಅಧಿಕ ಕೆಲಸದಿಂದ ನೀವು ಒತ್ತಡ, ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವುದು ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ.ರಾಜ್ಯದ ಎಲ್ಲಾ ಭಾಗದ ವೈದ್ಯರುಗಳಿಗೆ, ಕೊರೊನಾ ಯೋಧರಿಗೆ ನೈತಿಕ ಸ್ಫೂರ್ತಿಯನ್ನು ಮುಂದಿನ ದಿನಗಳಲ್ಲಿ ನಿಮ್ಮ ಒತ್ತಡಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಬಿಡುವಿಲ್ಲದೇ ಕೆಲಸ ಮಾಡುತ್ತಿರುವ ನಿಮಗೆ ರಜೆ, ಒತ್ತಡ ಸಡಿಲ ಮಾಡಲು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಸರ್ಕಾರದ ಪರವಾಗಿ ಭರವಸೆ ಕೊಟ್ಟಿದ್ದಾರೆ.

“ನಾಗೇಂದ್ರ ಅವರ ಸಾವಿನಲ್ಲಿ ಗೊಂದಲ ಸೃಷ್ಟಿಮಾಡುವುದು ಅಮಾನವೀಯವಾಗುತ್ತದೆ. ವೈದ್ಯಕೀಯ ಸಂಘದ ಎಲ್ಲಾ ಆತ್ಮೀಯರಿಗೆ ಮನವಿ ಮಾಡುವುದೇನೆಂದರೆ ನಾಗೇಂದ್ರ ಅವರ ಅಂತ್ಯ ಸಂಸ್ಕಾರವನ್ನು ನೆರವೇರಿಸುವ ಆದ್ಯತೆ ಕೊಡಿ. ಅವರ ಕುಟುಂಬ ವರ್ಗದವರಿಗೆ ಮುಖ್ಯ ಮಂತ್ರಿ ಬಿಎಸ್‌ವೈ ಜೊತೆ ಚರ್ಚೆಸಿ ನ್ಯಾಯ ಕೊಡಿಸುತ್ತೇವೆ”

“ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಪ್ರಾಣವನ್ನು ಹಿಂದಿರುಗಿ ತರಲು ಸಾಧ್ಯವಿಲ್ಲವೆಂದು ಗೊತ್ತಿದೆ. ಆದರೆ ಅವರ ಕುಟುಂಬದ ಸದಸ್ಯರಿಗೆ ಶಾಶ್ವತವಾದ ಪರಿಹಾರವನ್ನು ಸರ್ಕಾರ ಖಂಡಿತವಾಗಿಯೂ ಮಾಡುತ್ತದೆ. ಎಲ್ಲಾ ಕೋವಿಡ್‌ ಯೋಧರ ಜೊತೆ ಸರ್ಕಾರ ಇದೆ ಎಂದಿದ್ದಾರೆ.

“ಯಾರೂ ಕೂಡಾ ನಾಗೇಂದ್ರ ಅವರ ಸಾವನ್ನು ಅನ್ಯ ಕಾರಣಗಳಿಗೆ ದುರ್ಬಳಕೆ ಮಾಡಬಾರದು ಎಂದು ಕಳಕಳಿಯ ಮನವಿ ಮಾಡುತ್ತಿದ್ದೇನೆ. ಈಗಾಗಲೇ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಕೋವಿಡ್‌ ಯೋಧರ ನೆರವಿಗೆ ನಮ್ಮ ಸರ್ಕಾರ ಜೊತೆಗಿದೆ. ಇನ್ಮುಂದೆ ಇಂತಹ ಘಟನೆಗಳು ನಡೆಯದಂತೆ ಮತ್ತಷ್ಟು ಸೂಕ್ತ ಕ್ರಮಗಳು ಕೈಗೊಳ್ಳಲಾಗುವುದು” ಎಂದಿದ್ದಾರೆ.

LEAVE A REPLY

Please enter your comment!
Please enter your name here