ಕೇಂದ್ರ ಆರೋಗ್ಯ ಸಚಿವಾಲಯ ಘೋಷಿಸಿರುವ ಕೋವಿಡ್ -19 ಪ್ರಕರಣಗಳ ಸಂಖ್ಯೆಯನ್ನು ಗಮನಿಸಿದಾಗ, ದೇಶದಲ್ಲಿ ಆ ಸಂಖ್ಯೆಯು ವೇಗವಾಗಿ ಏರುತ್ತಿರುವುದನ್ನು ಕಾಣಬಹುದು. ಆದರೆ ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ಹೊಸ ಸೋಂಕುಗಳ ಪ್ರಮಾಣದಲ್ಲಿ ಕುಸಿತವನ್ನು ವರದಿ ಮಾಡಿದೆ.
ಗಮನಿಸಬೇಕಾದ ಸಂಗತಿಯೆಂದರೆ, ಇವುಗಳ ಪೈಕಿ ಮೂರು ರಾಜ್ಯಗಳು ಭಾರತದಲ್ಲಿ ವಲಸೆ ಕಾರ್ಮಿಕರ ಅತಿದೊಡ್ಡ ಮೂಲವಾಗಿದೆ. ರಾಷ್ಟ್ರವ್ಯಾಪಿ ಲಾಕ್ಡೌನ್ ಜಾರಿಯಾದ ಕಾರಣ, ಈ ಕಾರ್ಮಿಕರು ಮನೆಗೆ ಮರಳಲು ನಿರ್ಧರಿಸಿದ್ದರು. ಆಗ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗತೊಡಗಿತು.
ತವರು ರಾಜ್ಯಗಳಿಗೆ ಮರಳುವವರ ಸಂಖ್ಯೆ ಕಡಿಮೆಯಾದ ಕಾರಣ, ಈ ರಾಜ್ಯಗಳಲ್ಲಿ ಕೋವಿಡ್-19 ಹರಡುವಿಕೆಯ ಪ್ರಮಾಣವೂ ಕಡಿಮೆಯಾಗಿದೆ.
ರೈಲ್ವೆ ಮಂಡಳಿಯ ಅಧ್ಯಕ್ಷ ವಿನೋದ್ ಕುಮಾರ್ ಯಾದವ್ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಹೆಚ್ಚಿನ ವಲಸೆ ಕಾರ್ಮಿಕರು ತಮ್ಮ ಗಮ್ಯಸ್ಥಾನಗಳನ್ನು ತಲುಪಿದ್ದಾರೆ. ಉಳಿದ ವಲಸೆ ಕಾರ್ಮಿಕರನ್ನು ವಾಪಸ್ ಕಳುಹಿಸಲು ನಾವು ರಾಜ್ಯ ಸರ್ಕಾರಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ” ಎಂದು ಹೇಳಿದರು.