ಬೆಂಗಳೂರಿನಲ್ಲಿ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ : ಯಡಿಯೂರಪ್ಪ

0
143
Tap to know MORE!

ಬೆಂಗಳೂರಿನಲ್ಲಿ ಲಾಕ್ಡೌನ್ ಇನ್ನಷ್ಟು ದಿನ ಮುಂದುವರೆಯಬಹುದು ಎಂಬ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಊಹಾಪೋಹಗಳ ಮಧ್ಯೆ, ಇದರ ಬಗ್ಗೆ ಇನ್ನೂ ಯಾವುದೇ ಪ್ರಸ್ತಾಪವಾಗಲಿಲ್ಲ ಎಂದು ರಾಜ್ಯ ಸರ್ಕಾರವು ಸ್ಪಷ್ಟಪಡಿಸಿದೆ.

ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದ್ದಾರೆ. ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ನಿನ್ನೆ ರಾತ್ರಿಯಿಂದ ಲಾಕ್ಡೌನ್ ಜಾರಿಗೊಳಿಸಲಾಗಿದೆ. ಜನರು ಅಧಿಕಾರಿಗಳೊಂದಿಗೆ ಸಹಕರಿಸಬೇಕು ಮತ್ತು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದರು.

“ಮುಖ್ಯಮಂತ್ರಿ ಕೋವಿಡ್ ಕಾರ್ಯಪಡೆ ಸಭೆ ನಡೆಸಿದರು. ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಒಂದು ವಾರದ ಬಳಿಕ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾಪವಿಲ್ಲ. ಜನರು ಚಿಂತೆ ಮಾಡದೆ ಮತ್ತು ವದಂತಿಗಳಿಗೆ ಕಿವಿಗೊಡದೆ ಸಹಕರಿಸಬೇಕೆಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ” ಎಂದು ಮುಖ್ಯಮಂತ್ರಿ ಅವರ ಕಚೇರಿಯು ಟ್ವೀಟ್‌ನಲ್ಲಿ ತಿಳಿಸಿದೆ.

ಕಳೆದ ವಾರಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚಾಗಿದ್ದರಿಂದ, ಜುಲೈ 14ರ ರಾತ್ರಿ 8 ರಿಂದ ಜುಲೈ 22 ರ ಬೆಳಿಗ್ಗೆ 5 ಗಂಟೆಯವರೆಗೆ ಬೆಂಗಳೂರನ್ನು ಒಳಗೊಳ್ಳುವ ಎರಡು ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿತ್ತು.

LEAVE A REPLY

Please enter your comment!
Please enter your name here