ಬೆಂಗಳೂರಿನಲ್ಲಿ ಸಾವಿರ ; ಇಡೀ ರಾಜ್ಯದಲ್ಲಿ 1,839

0
152
Tap to know MORE!

ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರಿದಿದ್ದು, ರಾಜ್ಯ ರಾಜಧಾನಿಯಲ್ಲಿ ಮೊದಲ ಬಾರಿಗೆ ಒಂದೇ ದಿನ ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದೆ. ಬೆಂಗಳೂರಿನ 1,172 ಸೇರಿದಂತೆ, ರಾಜ್ಯದಲ್ಲಿ ಇಂದು ಒಟ್ಟು 1,839 ಸೋಂಕಿತರ ವರದಿಯಾಗಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 21,549ಗೆ ಏರಿದೆ. ಇವುಗಳ ಪೈಕಿ, 11,966 ಸಕ್ರಿಯ ಪ್ರಕರಣಗಳಿವೆ.

ರಾಷ್ಟ್ರಕ್ಕೆ ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ ಇಂದು ಸಾವಿರಕ್ಕೂ ಅಧಿಕ ಸೋಂಕಿತರ ವರದಿಯಾಗಿದ್ದು, ಹಲವಾರು ವಲಸೆ ಕಾರ್ಮಿಕರು ಬೆಂಗಳೂರು ಬಿಟ್ಟು ಮರಳಿ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದಾರೆ. ನಗರದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 7,250 ಗೆ ಏರಿದೆ. ಬಳ್ಳಾರಿ (605), ದಕ್ಷಿಣ ಕನ್ನಡ (552) ಮತ್ತು ಕಲಬುರ್ಗಿ (383) ಸಕ್ರಿಯ ಪ್ರಕರಣಗಳ ಲೆಕ್ಕಾಚಾರದಲ್ಲಿ ನಂತರದ ಸ್ಥಾನದಲ್ಲಿದೆ. ರಾಜ್ಯದ ಇತರ ಯಾವುದೇ ಜಿಲ್ಲೆಗಳಲ್ಲೂ ಈಗ 300ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇಲ್ಲ.

ಅದಲ್ಲದೆ ರಾಜ್ಯದಲ್ಲಿ ಸಾವಿರ ಸೋಂಕಿತರ ಜಿಲ್ಲೆಗಳ ಸಂಖ್ಯೆ ಐದಕ್ಕೇರಿದೆ. ಬೆಂಗಳೂರು ನಗರ, ಉಡುಪಿ ಮತ್ತು ಕಲಬುರ್ಗಿಯೊಂದಿಗೆ ಇದೀಗ ದಕ್ಷಿಣ ಕನ್ನಡ ಮತ್ತು ಬಳ್ಳಾರಿ ಹೊಸ ಸೇರ್ಪಡೆಯಾಗಿದೆ. ಬೆಂಗಳೂರು ನಗರವು 10,000 ದಡೆಗೆ ಮುನ್ನುಗ್ಗುತ್ತಿದೆ

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 75 ಮತ್ತು ಬಳ್ಳಾರಿ ಜಿಲ್ಲೆಯಲ್ಲಿ 73 ಸೋಂಕಿತರ ಪತ್ತೆಯಾಗಿ ನಂತರದ ಸ್ಥಾನದಲ್ಲಿದೆ.

ಅದಲ್ಲದೆ, ಇಂದು ರಾಜ್ಯದಲ್ಲಿ ಒಟ್ಟು 439 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 9,244 ಸೋಂಕಿತರು ಗುಣಮುಖರಾಗಿದ್ದಾರೆ.

ರಾಜ್ಯಾದ್ಯಂತ ಕೊರೋನಾ ತನ್ನ ಮರಣ ಮೃದಂಗವನ್ನೂ ಮುಂದುವರೆಸಿದ್ದು, ಇಂದು ದಾಖಲೆಯ 42 ಮಂದಿಯನ್ನು ಬಲಿ ತೆಗೆದುಕೊಂಡಿದೆ. , ಬೆಂಗಳೂರು ನಗರದಲ್ಲಿ ದಾಖಲೆಯ 24 ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ ಬೀದರ್ ನಲ್ಲಿ 6, ದಕ್ಷಿಣ ಕನ್ನಡದ 4, ಧಾರವಾಡ ಮತ್ತು ಕಲಬುರ್ಗಿಯಲ್ಲಿ ತಲಾ 3, ಹಾಸನ ಮತ್ತು ಬೆಂಗಳೂರು ಗ್ರಾಮಾಂತರದ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here