ಬೆಂಗಳೂರಿನಲ್ಲಿ 596 ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ ದಾಖಲೆಯ 918 ಸೋಂಕಿತರು ಬೆಳಕಿಗೆ!

0
122
Tap to know MORE!

ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ತನ್ನ ರುದ್ರ ನರ್ತನವನ್ನು ಮುಂದುವರೆಸಿದ್ದು, ಇಂದು ಒಂದೇ ದಿನ 596 ಜನರಲ್ಲಿ ಸೋಂಕು ದೃಢಪಟ್ಟಿದ್ದು. ಬೆಂಗಳೂರಿನ 596 ಸೇರಿದಂತೆ, ರಾಜ್ಯದಲ್ಲಿ ಒಟ್ಟು ದಾಖಲೆಯ 918 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 900ಕ್ಕೂ ಅಧಿಕ ಸೋಂಕಿತರು ಬೆಳಕಿಗೆ ಬಂದಿರುವುದು ಇದುವರೆಗಿನ ದಾಖಲೆಯಾಗಿದೆ. ಇದರಿಂದಾಗಿ ಒಟ್ಟು ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 3,905 ಏರಿದಂತಾಗಿದೆ.

ಬೆಂಗಳೂರು ನಗರದಲ್ಲಿ ಸೋಂಕು ಈಗಾಗಲೇ ಸಮುದಾಯಕ್ಕೆ ಹಬ್ಬಿರುವುದು ಸ್ಪಷ್ಟವಾಗಿದೆ. ಮಾದರಿ ನಗರವಾಗಿದ್ದ ಬೆಂಗಳೂರಿನಲ್ಲಿ, ಇದೀಗ ಒಟ್ಟು 1913 ಸಕ್ರಿಯ ಪ್ರಕರಣಗಳಿದ್ದು, ಇತರ ಯಾವುದೇ ಜಿಲ್ಲೆಯಲ್ಲೂ ಈಗ 400ಕ್ಕೂ ಅಧಿಕ ಸಕ್ರಿಯ ಪ್ರಕರಣಗಳು ಇಲ್ಲ.

ಇಂದಿನ ವರದಿಯಲ್ಲಿ ರಾಜ್ಯ ರಾಜಧಾನಿಯನ್ನು ಹೊರತುಪಡಿಸಿ, ಇತರ ಯಾವುದೇ ಜಿಲ್ಲೆಯಲ್ಲೂ, 50ಕ್ಕೂ ಅಧಿಕ ಸೋಂಕಿತರು ಪತ್ತೆ ಆಗಲಿಲ್ಲ. ದಕ್ಷಿಣ ಕನ್ನಡ(49) ಮತ್ತು ಕಲಬುರ್ಗಿ (33) ನಂತರದ ಸ್ಥಾನದಲ್ಲಿದೆ.

ಅದಲ್ಲದೆ, ಇಂದು ರಾಜ್ಯದಲ್ಲಿ ಒಟ್ಟು 371 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ. ಯಾದಗಿರಿಯಲ್ಲಿ ಒಂದೇ ದಿನ ಗರಿಷ್ಠ 102 ಸೋಂಕಿತರು ಗುಣಮುಖರಾಗಿದ್ದಾರೆ. ಬಳ್ಳಾರಿ(60) ಮತ್ತು ಬೀದರ್ (60) ನಂತರದ ಸ್ಥಾನದಲ್ಲಿದೆ. ರಾಜ್ಯದಲ್ಲಿ ಇದುವರೆಗೆ, ಒಟ್ಟು 7287 ಸೋಂಕಿತರು ಗುಣಮುಖರಾಗಿದ್ದಾರೆ. ಉಡುಪಿ ಜಿಲ್ಲೆಯೊಂದರಲ್ಲೇ ಒಟ್ಟು 1,038 ಮಂದಿ ಗುಣಮುಖರಾಗಿರುತ್ತಾರೆ.

ರಾಜ್ಯಾದ್ಯಂತ ಒಟ್ಟು 11 ಸೋಂಕಿತರು ಇಂದು ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರ ಮತ್ತು ಬೀದರ್ ಜಿಲ್ಲೆಯಲ್ಲಿ ತಲಾ 3, ಕಲಬುರ್ಗಿಯಲ್ಲಿ 2 ಮತ್ತು ಗದಗ, ಧಾರವಾಡ ಹಾಗೂ ಬಳ್ಳಾರಿಯಲ್ಲಿ ತಲಾ 1 ಸೋಂಕಿತರು ಸಾವನ್ನಪ್ಪಿದ್ದಾರೆ.

LEAVE A REPLY

Please enter your comment!
Please enter your name here