ಬೆಂಗಳೂರು : ಬಿಬಿಎಂಪಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ

0
193
Tap to know MORE!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ( ಬಿಬಿಎಂಪಿ) 198 ವಾರ್ಡ್ ಗಳಿಗೆ ಚುನಾವಣೆ ನಡೆಸಬೇಕು ಎಂದು ಮಹತ್ವದ ಆದೇಶವನ್ನು ಹೈಕೋರ್ಟ್‌ ನೀಡಿದೆ.

ಈ ಕುರಿತಾಗಿ ರಾಜ್ಯ ಸರ್ಕಾರ ನಾಲ್ಕು ವಾರಗಳಲ್ಲಿ ಮೀಸಲು ಅಂತಿಮ‌ ಅಧಿಸೂಚನೆ ಹೊರಡಿಸಬೇಕು, ಆನಂತರ ಆರು ವಾರಗಳಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ವಾರ್ಡ್ ಗಳನ್ನು ಮರು ವಿಂಗಡಣೆ ಮಾಡಿ 198 ರಿಂದ 243 ಕ್ಕೆ ಹೆಚ್ಚಿಸಲು ಜಾರಿಗೊಳಿಸಿದ ಕಾಯಿದೆ ಈ ಚುನಾವಣೆಗೆ ಅನ್ವಯವಾಗುವುದಿಲ್ಲ ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಸರ್ಕಾರದಿಂದ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್?

ಬಿಬಿಎಂಪಿಯ 198 ವಾರ್ಡ್‌ಗಳನ್ನು 243ಕ್ಕೆ ಹೆಚ್ಚಿಸಲು ವಿಧಾನಮಂಡಲದಲ್ಲಿ ವಿಧೇಯಕ ಮಂಡಿಸಿ ರಾಜ್ಯ ಸರ್ಕಾರ ಒಪ್ಪಿಗೆ ಪಡೆದಿದೆ. ಶಾಸಕ ಎಸ್‌.ರಘು ನೇತೃತ್ವದ ಸಮಿತಿಯು ಅಧ್ಯಯನ ನಡೆಸಿ ಈಗಾಗಲೇ ಮಧ್ಯಂತರ ವರದಿ ನೀಡಿದ್ದು, ಸದ್ಯದಲ್ಲೇ ಅಂತಿಮ ವರದಿಯನ್ನು ಸಲ್ಲಿಸುವ ಹಾದಿಯಲ್ಲಿದೆ. ಈ ಕಾರಣದಿಂದಾಗಿ ಪಾಲಿಕೆಗೆ ಚುನಾವಣೆಯನ್ನು ನಿಗದಿತ ಅವಧಿಯೊಳಗೆ ನಡೆಸದೆ ಸರ್ಕಾರ ಮುಂದೂಡಿತ್ತು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ರಾಜ್ಯ ಸರ್ಕಾರದ ಈ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್‌ನ ಮಾಜಿ ಕಾರ್ಪೊರೇಟರ್‌ ಎಂ.ಶಿವರಾಜ್‌ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಕೂಡಲೇ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ಶುಕ್ರವಾರ ತೀರ್ಪು ಪ್ರಕಟಿಸಿದ್ದು, ಪಾಲಿಕೆಗೆ ಚುನಾವಣೆ ನಡೆಸುವಂತೆ ಮಹತ್ವದ ಆದೇಶವನ್ನು ನೀಡಿದೆ. ನ್ಯಾಯಾಲದ ಈ ಆದೇಶದಿಂದ ಚುನಾವಣೆಯನ್ನು ಮುಂದೂಡುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆ ಉಂಟಾಗಿದೆ.

LEAVE A REPLY

Please enter your comment!
Please enter your name here