ಗಣರಾಜ್ಯೋತ್ಸವ 2021: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಖ್ಯ ಅತಿಥಿ

0
173
Tap to know MORE!

ನವದೆಹಲಿ ಡಿ.15: 2021ರಲ್ಲಿ ನಡೆಯಲಿರುವ ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಮುಖ್ಯ ಅಥಿಯಾಗಿ ಭಾಗವಹಿಸಲಿದ್ದಾರೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೋಮಿನಿಕ್ ರಾಬ್ ತಿಳಿಸಿದ್ದಾರೆ.

ನವದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಚಿವ ಎಸ್. ಜೈಶಂಕರ್ ಜತೆಗಿನ ಮಾತುಕತೆ ವೇಳೆ ಡೋಮಿನಿಕ್ ರಾಬ್ ಖಚಿತಪಡಿಸಿದ್ದಾರೆ. ಮುಂದಿನ ವರ್ಷ(2021) ನಡೆಯಲಿರುವ ರಾಜ್ಯೋತ್ಸವಕ್ಕೆ ಮುಖ್ಯ ಅಥಿಯಾಗಿ ಭಾಗವಹಿಸಬೇಕು ಎಂಬ ಭಾರತದ ಆಹ್ವಾನವನ್ನು ಬೋರಿಸ್ ಜಾನ್ಸ್ ನ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: 80 ಕೆಜಿ ಭಾರ ಎತ್ತಿ ದಾಖಲೆ ಬರೆದ 7 ವರ್ಷದ ಬಾಲಕಿ!

ಮುಂದಿನ ವರ್ಷ ಬ್ರಿಟನ್ ಆಯೋಜಿಸಿರುವ ಜಿ7ಶೃಂಗದ ಜತೆ ಕೈಜೋಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೋರಿಸ್ ಜಾನ್ಸನ್ ಆಹ್ವಾನಿಸಿದ್ದಾರೆ. ಅಲ್ಲದೇ ಜನವರಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಬೇಕೆಂಬ ಆಹ್ವಾನವನ್ನು ಬೋರಿಸ್ ಸ್ವೀಕರಿಸಿದ್ದಾರೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೋಮಿನಿಕ್ ರಾಬ್ ತಿಳಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಉಭಯ ದೇಶಗಳ ನಡುವೆ ಅಗತ್ಯವಿರುವ ದ್ವಿಪಕ್ಷೀಯ ಸಂಬಂಧದ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಬ್ ಹಾಗೂ ಜೈ ಶಂಕರ್ ಜಂಟಿಯಾಗಿ ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ವಿವರಿಸಿದ್ದಾರೆ.

FACT CHECK : “ದೆಹಲಿ ಗಲಭೆಯ ಬಂಧಿತರನ್ನು ಬಿಡುಗಡೆಗೊಳಿಸುವಂತೆ ಕೇಳಿಕೊಂಡ ರೈತರು!”

LEAVE A REPLY

Please enter your comment!
Please enter your name here