ನಗು ನಗುತ ನೇಣಿಗೆ ಕೊರಳೊಡ್ಡಿದ ಸತ್ಕ್ರಾಂತಿ ಹರಿಕಾರ ಭಗತ್ ಸಿಂಗ್

0
247
Tap to know MORE!

‘ಮೇರಾ ರಂಗ್ ದೇ ಬಸಂತಿ ಚೋಲಾ..’ ಎಂದು ಹಾಡು ಹಾಡುತ್ತಾ, ಎದೆಯುಬ್ಬಿಸಿ ಆ ಮೂವರು ಯುವಕರು ನೇಣುಗಂಬಕ್ಕೆ ಚುಂಬಿಸಿ ಕೊರಳೊಡ್ಡಿದಾಗ ಇಡೀ ದೇಶವೇ ಅವರತ್ತ ತಿರುಗಿ ನೋಡಿತು.ಭಾರತ ಮಾತೆಯ ದಾಸ್ಯದ ಸಂಕೋಲೆ ಕಳಚಲು ತಮ್ಮ ಪ್ರಾಣ ಅರ್ಪಿಸಿದಾಗ ‘ಇಂಕ್ವಿಲಾಬ್ ಜಿಂದಾಬಾದ್’ಘೋಷಣೆ ದೇಶವ್ಯಾಪಿ ಹರಡಿತು.

1931 ಮಾರ್ಚ್ 31 ರಂದು ಲಾಹೋರ್ ಸೆಂಟ್ರಲ್ ಜೈಲಿನಲ್ಲಿ ಗಲ್ಲಿಗೇರಿದ ಆ ಮೂವರು ಮಹಾನ್ ಕ್ರಾಂತಿಕಾರಿಗಳ ಪೈಕಿ ಓರ್ವನಾದ ಭಗತ್ ಸಿಂಗ್ .1907, ಸೆಪ್ಟೆಂಬರ್.28 ರಂದು ಪಂಜಾಬ್ ನ ಲ್ಯಾಲ್ ಪುರ್ ಜಿಲ್ಲೆಯ ಭಂಗಾ ಗ್ರಾಮದಲ್ಲಿ ಸರ್ದಾರ್ ಕಿಶನ್ ಸಿಂಗ್ ಸಂಧು ಮತ್ತು ವಿದ್ಯಾವತಿ ಅವರ ಹಿರಿಯ ಪುತ್ರನಾಗಿ ಭಗತ್ ಸಿಂಗ್ ಜನಿಸಿದರು. ಚಿಕ್ಕಂದಿನಿಂದಲೇ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಮೈಗೂಡಿಸಿಕೊಂಡಿದ್ದ ಭಗತ್ ಸಿಂಗ್,ಮಹಾತ್ಮಾ ಗಾಂಧಿಯವರ ಅಹಿಂಸಾವಾದದ ಬಗ್ಗೆ ಭಗತ್ ಸಿಂಗ್‌ಗೆ ಹೆಚ್ಚು ನಂಬಿ ಇಟ್ಟಿರಲಿಲ್ಲ. ಮದುವೆಯಾಗಲು ನಿರಾಕರಿಸಿದ ಅವರು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು.

ಇದನ್ನೂ ಓದಿ: ಈ ಸ್ವಾರ್ಥರಹಿತ ಹೋರಾಟಗಾರ್ತಿಯನ್ನು ಮರೆತೇ ಬಿಟ್ಟೆವೆ?!

ದೆಹಲಿಯ ಸೆಂಟ್ರಲ್ ಅಸೆಂಬ್ಲಿಯಲ್ಲಿ ಬಾಂಬ್ ಎಸೆದ ಅವರು ಬ್ರಿಟಿಷ್ ಪೊಲೀಸರಿಗೆ ಶರಣಾದರು. ಆದರೆ ಬಾಂಬ್ ಎಸೆತದಿಂದ ಯಾವುದೇ ಸಾವುನೋವು ಆಗಿರಲಿಲ್ಲ. ಬ್ರಿಟಿಷರ ಗಮನ ಸೆಳೆದು ಸತ್ಯ ಹುಡುಕುವುದೇ ಭಗತ್, ಮತ್ತು ಅವರ ಗೆಳೆಯರ ಉದ್ದೇಶವಾಗಿತ್ತು. ಹೀಗಾಗಿ, ರಿವಾಲ್ವಾರ್ ಎಸೆದು, ತಪ್ಪಿಸಿಕೊಳ್ಳುವ ಪ್ರಯತ್ನ ಕೂಡ ಮಾಡದೆ ‘ಇನ್ಕ್ವಿಲಾಬ್ ಜಿಂದಾಬಾದ್’ ಎಂದು ಕೂಗುತ್ತಲೇ ಸೆರೆಯಾದರು.

ಇನ್ಕ್ವಿಲಾಬ್ ಜಿಂದಾಬಾದ್ (ಕ್ರಾಂತಿ ಚಿರಾಯುವಾಗಲಿ) ಘೋಷಣೆ ಹುಟ್ಟು ಹಾಕಿದ್ದೇ ಭಗತ್ ಸಿಂಗ್. ಇದು ಅಂತಿಮವಾಗಿ ಭಾರತದ ಸಶಸ್ತ್ರ ಸ್ವಾತಂತ್ರ್ಯ ಹೋರಾಟದ ಘೋಷಣೆಯಾಗಿ ಮಾರ್ಪಟ್ಟಿತು.ಸಮಾಜವಾದ ಮತ್ತು ಕ್ರಾಂತಿಯ ಬಗೆಗಿನ ಸಾಹಿತ್ಯವನ್ನು ಅವರು ಅತೀ ಚಿಕ್ಕ ವಯಸ್ಸಿನಲ್ಲಿಯೇ ಓದಲಾರಂಭಿಸಿದ್ದರು. ಅವರಲ್ಲಿದ್ದ ಓದಿನ ಪ್ರೀತಿ ಬದುಕಿನ ಕೊನೆ ಕ್ಷಣದವರೆಗೂ ಇತ್ತು.

ಬ್ರಿಟಿಷ್ ಪೊಲೀಸ್ ಅಧಿಕಾರಿಗೆ ಗುಂಡಿಕ್ಕಿದ ಆರೋಪದ ಮೇಲೆ ಅವರಿಗೆ ನೇಣು ಶಿಕ್ಷೆ ವಿಧಿಲಾಗಿತ್ತು. ಮಾರ್ಚ್ 24, 1931ರಂದು ಅವರನ್ನು ನೇಣಿಗೇರಿಸುವುದೆಂದು ತೀರ್ಮಾನಿಸಲಾಗಿತ್ತು.
ಆದರೆ ಸಿಂಗ್ ಗೆ ವಿಧಿಸಿರುವ ಶಿಕ್ಷೆಯನ್ನು ರದ್ಧು ಮಾಡಬೇಕೆಂದು ಲಾಹೋರ್ ಸೆಂಟ್ರಲ್ ಜೈಲಿನ ಎದುರು ಸುಮಾರು 25 ಸಾವಿರಕ್ಕೂ ಮಿಕ್ಕಿ ಜನ ಪ್ರತಿಭಟನೆಯನ್ನು ಹಮ್ಮಿಕೊಂಡದ್ದನ್ನು ಅರಿತ ಬ್ರಿಟಿಷರು ಅದನ್ನು 11 ಗಂಟೆ ಹಿಂದೂಡಿ ಮಾರ್ಚ್ 23 1931, 7.30ಕ್ಕೆ ಗಲ್ಲಿಗೇರಿಸಿದರು.

ನಿಗದಿಪಡಿಸಿದ ವೇಳೆಗಿಂತ 1 ಗಂಟೆ ಮೊದಲೇ ಭಗತ್ ನನ್ನು ಗಲ್ಲಿಗೇರಿಸಲಾಯಿತು ಮತ್ತು ಸತ್ಲೆಜ್ ನದಿಯ ದಡದಲ್ಲಿ ಜೈಲು ಅಧಿಕಾರಿಗಳೇ ರಹಸ್ಯವಾಗಿ ಅಂತ್ಯಕ್ರಿಯೆ ನೇರವೇರಿಸಿದರು. ಭಾರತೀಯ ಕ್ರಾಂತಿ ಪರಂಪರೆಯ ಸತ್ಕ್ರಾಂತಿ ಹರಿಕಾರ ಭಗತ್ ಸಿಂಗ್ ತನ್ನ 23ನೇ ವರ್ಷ ವರ್ಷಕ್ಕೆ ಅಮರರಾದರು.

LEAVE A REPLY

Please enter your comment!
Please enter your name here