ಭಾನುವಲ್ಲಿ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ಬೆಳಕಿಗೆ

0
76

ದಾವಣಗೆರೆ: ಜಿಲ್ಲೆಯ ಹರಿಹರ ತಾಲೂಕಿನ ಭಾನುವಲ್ಲಿ ಗ್ರಾಮದಲ್ಲಿ ಮೊದಲ ಕೋವಿಡ್ ಪ್ರಕರಣ ಬೆಳಕಿಗೆ ಬಂದಿದೆ. ಇಂದು ಗ್ರಾಮದ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದ್ದು ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದೆ.

ಮಂಗಳೂರು ಆಸ್ಪತ್ರೆಯಿಂದ ಗ್ರಾಮಕ್ಕೆ ಮರಳಿದ ಓರ್ವ ಯುವಕನನ್ನು ಪರೀಕ್ಷೆಗೆ ಒಳಪಡಿಸಿದಾಗ ಆತನಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮತ್ತೊಂದು ಸೋಂಕಿತೆ ಗರ್ಭಿಣಿ ಎಂದು ತಿಳಿದುಬಂದಿದೆ. ವೈದ್ಯರು ಸೋಂಕಿತರ ಮನೆಗೆ ತೆರಳಿ ರಕ್ತದ ಸ್ಯಾಂಪಲ್ ತೆಗೆದುಕೊಂಡಿದ್ದಾರೆ

LEAVE A REPLY

Please enter your comment!
Please enter your name here