ಭಾರತಕ್ಕೂ ಲಗ್ಗೆಯಿಟ್ಟ ಹೊಸ ಮಾದರಿಯ ಕೊರೋನಾ!

0
210
Tap to know MORE!

ನವದೆಹಲಿ ಡಿ 22: ಬ್ರಿಟನ್‌ನಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ಸೋಂಕಿನ ಹೊಸ ಮಾದರಿ ಭಾರತಕ್ಕೂ ಲಗ್ಗೆ ಇಟ್ಟಿದೆ. ಇಂಗ್ಲೆಂಡ್’ನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ಹೊಸ ಮಾದರಿಯ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಇಂದು ಬೆಳಿಗ್ಗೆ ಬ್ರಿಟನ್ ನಿಂದ ಚೆನ್ನೈ ವಿಮಾನ ನಿಲ್ದಾಣಕ್ಕೆ ಒಟ್ಟು 15 ಮಂದಿ ಆಗಮಿಸಿದ್ದು, ಅವರಲ್ಲಿ ಒಬ್ಬರಿಗೆ ಹೊಸ ಮಾದರಿಯ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಇದನ್ನೂ ಓದಿ: ಜ.1 ರಿಂದ ಶಾಲೆ – ಕಾಲೇಜು ಆರಂಭ | ಹಾಜರಾತಿ ಕಡ್ಡಾಯವಲ್ಲ

ಈ ನಡುವೆ ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್ ಅವರು ವಿಮಾನ ನಿಲ್ದಾಣಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಯಾಣಿಕರ ಮಾದರಿಗಳನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಪುಣೆಗೆ ಕಳುಹಿಸಲಾಗಿದ್ದು, ವ್ಯಕ್ತಿಗೆ ಹೊಸ ಮಾದರಿಯ ಕೊರೋನಾ ಸೋಂಕು ತಗುಲಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕಳೆದ 10 ದಿನಗಳಲ್ಲಿ ಬ್ರಿಟನ್ ನಿಂದ ರಾಜ್ಯಕ್ಕೆ ಆಗಮಿಸಿದ ಎಲ್ಲಾ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯವನ್ನು ಈಗಾಗಲೇ ಆರೋಗ್ಯ ಇಲಾಖೆ ಆರಂಭಿಸಿದೆ ಎಂದು ತಿಳಿಸಿದ್ದಾರೆ.

ಸೋಂಕಿತ ಪ್ರಯಾಣಿಕರನ್ನು ಗಿಂಡಿಯ ಕಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿರುವ ವಿಶೇಷ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ.

ಭಾರಿ ಸುದ್ದಿಯಲ್ಲಿದೆ #Covid20 ! ಇಂಗ್ಲೆಂಡ್‌ನಲ್ಲಿ ನಿಯಂತ್ರಣ ಮೀರಿದ ಹೊಸ ರೂಪದ ಕೊರೋನಾ!

LEAVE A REPLY

Please enter your comment!
Please enter your name here