ಬೆಂಗಳೂರು, ಸೆಪ್ಟೆಂಬರ್ 20: ರಾಜ್ಯಾದ್ಯಂತ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾನುವಾರ ಬೆಳಿಗ್ಗೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಫೋನ್ ಮೂಲಕ ಮಾತನಾಡಿದ್ದಾರೆ ಮತ್ತು ಜನರನ್ನು ತಗ್ಗು ಪ್ರದೇಶಗಳಿಂದ ಸ್ಥಳಾಂತರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕಳೆದ ರಾತ್ರಿಯಿಂದ ಭಾರೀ ಮಳೆಯಿಂದಾಗಿ ರಾಜ್ಯದ ವಿವಿಧ ಭಾಗಗಳು ಮುಳುಗಿವೆ. ಕರಾವಳಿ ಪ್ರದೇಶದ ಹಲವು ಭಾಗಗಳಲ್ಲಿಯೂ ಭಾರಿ ಮಳೆ ಮತ್ತು ತಗ್ಗು ಪ್ರದೇಶಗಳು ಮುಳುಗಿದೆ. ಇದೇ ವೇಳೆ, ರಾಜ್ಯ ಸರ್ಕಾರದಿಂದ ಎಲ್ಲ ನೆರವು ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.
ಮಳೆಯಿಂದ ಅತಿವೃಷ್ಠಿ ಕಂಡು ಬಂದಿರುವ ಪ್ರದೇಶಗಳಲ್ಲಿ ಜನರನ್ನು ಸುರಕ್ಷತೆ ಸ್ಥಳಾಂತರ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಅವರು ಸೂಚನೆ ನೀಡಿದ್ದಾರೆ.ಪ್ರವಾಹ ಪರಿಸ್ಥಿತಿ ಕಂಡು ಬಂದಿರುವ ಪ್ರದೇಶಗಳಿಗೆ ಎಸ್ ಡಿಆರ್ ಎಫ್,ಎನ್ ಡಿಆರ್ ಎಫ್ ತಂಡಗಳನ್ನು ರವಾನಿಸಿ ಜನರ ಪ್ರಾಣ ರಕ್ಷಿಸುವಂತೆಯೂ ಅವರು ಇದೇ ವೇಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಏತನ್ಮಧ್ಯೆ, ಜನರನ್ನು ರಕ್ಷಿಸಲು ವಿಶೇಷ ಎನ್ಡಿಆರ್ಎಫ್ ತಂಡಗಳನ್ನು ಮೈಸೂರಿನಿಂದ ಉಡುಪಿಗೆ ಕರೆದೊಯ್ಯಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಪ್ರಾಣಹಾನಿ ಬರದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.