ತೋಕೂರು :ಆನ್ಲೈನ್ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ

0
99
Tap to know MORE!

ಜಿಲ್ಲಾ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್(ರಿ) ತೋಕೂರು ಹಳೆಯಂಗಡಿ ಇದರ ಸಂಯೋಜನೆಯಲ್ಲಿ , ಫಿಟ್ ಇಂಡಿಯಾ ಅಭಿಯಾನದ ಅಡಿಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ನೃತ್ಯ, ಸಂಗೀತ, ಕರಾಟೆ ವಿದ್ಯಾರ್ಥಿಗಳಿಗೆ ಮತ್ತು ಸಂಸ್ಥೆಯ ಸದಸ್ಯರ ಮಕ್ಕಳಿಗಾಗಿ ಆಯೋಜಿಸಿದ್ದ ಆನ್ ಲೈನ್ ಭಾಷಣ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಸಮಾರಂಭವು ಆದಿತ್ಯವಾರ ಸಂಜೆ ಘಂಟೆ 4.30 ಕ್ಕೆ ಸಂಸ್ಥೆಯ ಸಭಾಂಗಣದಲ್ಲಿ ಜರುಗಿತು.

ಯುವವಾಹಿನಿ(ರಿ) ಇದರ ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಕ್ಕಳಲ್ಲಿನ ಪ್ರತಿಭೆಯನ್ನು ಆನ್ ಲೈನ್ ಬಾಷಣದ ಮೂಲಕ ಅವರನ್ನು ಮುಖ್ಯ ವಾಹಿನಿಗೆ ತರುವಲ್ಲಿ ಕಾರಣಕರ್ತರಾದ ಸಂಸ್ಥೆಯಯವರನ್ನು ಅಭಿನಂದಿಸಿ ಶುಭ ಹಾರೈಸಿದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಎನ್.ಐ.ಟಿ.ಕೆ ಸಿಬ್ಬಂದಿ ರಾಜೇಶ್ ದೇವಾಡಿಗ ಬಹುಮಾನ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು

ಕಲಾ ಶಿಕ್ಷಕರಾದ ಸುಹಾಸ್ ನಾನಿಲ್, ಕೃಷ್ಣಾಪುರ ಸರಕಾರಿ ಕಾಲೇಜಿನ ಉಪನ್ಯಾಸಕಿ ಪ್ರತಿಮಾ ಗಣೇಶ್ ಇವರು ಅತಿಥಿಗಳಾಗಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರಾದ ನಾರಾಯಣ ಜಿ ಕೆ, ಅಧ್ಯಕ್ಷರು ಸಂತೋಷ್ ದೇವಾಡಿಗ,ಮಹಿಳಾ ಸಮಿತಿ ಕಾರ್ಯಧ್ಯಕ್ಷೆ ವಾಣಿ ಮಹೇಶ್ ಉಪಸ್ಥಿತರಿದ್ದರು.

ಮಹಿಳಾ ಸಮಿತಿ ಸದಸ್ಯೆಯರಾದ ಜ್ಯೋತಿ ಕುಲಾಲ್, ಶೋಭಾ ವರುಣ್ ಅಂಚನ್ ಪ್ರಾರ್ಥನೆ ಹಾಡಿದರು. ಸಂಸ್ಥೆಯ ಅಧ್ಯಕ್ಷರಾದ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಬೇಕಲ್ ಇವರು ಬಹುಮಾನ ಪಡೆದ ಮಕ್ಕಳ ವಿಜೇತರ ಪಟ್ಟಿಯನ್ನು ವಾಚಿಸಿದರು. ಕಾರ್ಯದರ್ಶಿ ಜಗದೀಶ್ ಕುಲಾಲ್ ವಂದಿಸಿದರು. ಕಾರ್ಯಕಾರಿ ಸಮಿತಿ ಅಧ್ಯಕ್ಷರು ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here