ನೂತನ ಸಂಸತ್ ಭವನಕ್ಕೆ ಭೂಮಿ ಪೂಜೆ ನೆರವೇರಿಸಿದ ಪ್ರಧಾನಿ ಮೋದಿ

0
206
Tap to know MORE!

ನವದೆಹಲಿ, ಡಿ. 10: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ(ಡಿಸೆಂಬರ್ 10)ದಂದು ನವದೆಹಲಿಯ ಸಂಸದ್ ಮಾರ್ಗದಲ್ಲಿ ನೂತನ ಸಂಸತ್ ಭವನದ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ತ್ರಿಕೋನಾಕಾರದ ವಿನ್ಯಾಸದಲ್ಲಿ ನಿರ್ಮಾಣವಾಗಲಿರುವ ಕಟ್ಟಡ 2022ರಲ್ಲಿ ಪೂರ್ಣಗೊಳ್ಳಲಿದೆ. 2022ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಲಿದ್ದು, ಜನತೆಗೆ ಕೊಡುಗೆ ಎಂದು ಮೋದಿ ಹೇಳಿದರು. ನಾಡಿನ ವಿವಿಧೆಡೆಗಳಿಂದ ಬಂದಿರುವ ಧಾರ್ಮಿಕ ಮುಖಂಡರು, ಪುರೋಹಿತರುಗಳು ಸರ್ವಧರ್ಮ ಪ್ರಾರ್ಥನೆ ಸಲ್ಲಿಸಿದರು.

ಇದನ್ನೂ ಓದಿ: ಬಹುಭಾಷೆಗಳಲ್ಲಿ ತೆರೆಯ ಮೇಲೆ ಬರಲಿದೆ ಉಳ್ಳಾಲದ “ರಾಣಿ ಅಬ್ಬಕ್ಕ” ಜೀವನಾಧಾರಿತ ಸಿನಿಮಾ!

ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ವೆಂಕಟೇಶ್ ಜೋಶಿ, ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ(ಸ್ವತಂತ್ರ ಹೊಣೆಗಾರಿಕೆ) ಹರ್ ದೀಪ್ ಸಿಂಗ್ ಪುರಿ, ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಮತ್ತಿತರರು ಭಾಗವಹಿಸಿದ್ದಾರೆ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕರ್ನಾಟಕ ಸಿಎಂ ಯಡಿಯೂರಪ್ಪ ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಂಡಿದ್ದಾರೆ.

ಭೂಮಿ ಪೂಜೆಗೆ ಶೃಂಗೇರಿ ಮಠದ ಪುರೋಹಿತರ ಪೌರೋಹಿತ್ಯ

ಹಿರಿಯ ಪುರೋಹಿತ ನಾಗರಾಜ ಅಡಿಗ ನೇತೃತ್ವದಲ್ಲಿ ಆರು ಮಂದಿ ಪುರೋಹಿತರ ತಂಡದಿಂದ ಪೂಜೆ ನೆರವೇರಿದೆ. 2022 ರಲ್ಲಿ ನೂತನ ಸಂಸತ್ ಭವನ ತಲೆ ಎತ್ತಲಿದೆ. 64,500 ಚದರ ಮೀಟರ್ ಪ್ರದೇಶದಲ್ಲಿ ತ್ರಿಭುಜಾ ಕೃತಿಯ ಸಂಸತ್ ಅವರಣ ನಿರ್ಮಾಣ ಆಗಲಿದೆ. ಈ ಯೋಜನೆಗೆ 971 ಕೋಟಿ ವೆಚ್ಚದ ನಿರೀಕ್ಷೆ ಇದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೇಂದ್ರ ಸಂಪುಟ ಸಚಿವರು, ರಾಜ್ಯ ಸಚಿವರು, ಸಂಸದರು, ಕಾರ್ಯದರ್ಶಿಗಳು, ರಾಯಭಾರಿಗಳು/ಹೈಕಮಿಷನರ್ ಗಳು ಸೇರಿದಂತೆ ಸುಮಾರು 200 ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

LEAVE A REPLY

Please enter your comment!
Please enter your name here