ಮಂಗಳೂರು: ಆ.5 ರಂದು ನಗರದಲ್ಲಿ ಸೆಕ್ಷನ್ 144 ಜಾರಿ!

0
187
Tap to know MORE!

ಮಂಗಳೂರು : ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಬಹುನಿರೀಕ್ಷಿತ ಭೂಮಿ ಪೂಜೆ ಕಾರ್ಯಕ್ರಮ ಆಗಸ್ಟ್ 5 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಆ.5 ರಂದು ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು ನಗರದಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಿತ ಆದೇಶಗಳನ್ನು ಜಾರಿಗೊಳಿಸಲಿದ್ದಾರೆ.

ನಗರ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಅವರು ಆಗಸ್ಟ್ 5 ರಂದು ನಗರದಲ್ಲಿ ಕೆಲವು ಸಂಘಟನೆಗಳಿಂದ ಯೋಜಿಸಲಾಗುತ್ತಿರುವ ಪ್ರತಿಭಟನೆಗಳ ಬಗ್ಗೆ ಮಾಹಿತಿ ಪಡೆದ ನಂತರ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಯಾವುದೇ ಆದೇಶಗಳನ್ನು ಉಲ್ಲಂಘಿಸುವವರು ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಪೊಲೀಸ್ ಆಯುಕ್ತರ ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here