2019ರ ಡಿಸೆಂಬರ್ 19ರಂದು ಮಧ್ಯಾಹ್ನ ನಗರದ ಸ್ಟೇಟ್ ಬ್ಯಾಂಕ್ ಸಮೀಪ ನಿಷೇಧಾಜ್ಞೆ ಉಲ್ಲಂಘಿಸಿ ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿತ್ತು. ಈ ಸಂದರ್ಭ ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನ ನಡೆಸುತ್ತಿದ್ದ ಸಂದರ್ಭ ಘರ್ಷಣೆ ನಡೆದು ಬಳಿಕ ನಿಯಂತ್ರಣಕ್ಕೆ ಬಾರದಿದ್ದಾಗ ಪೊಲೀಸರು ಗಲಭೆಕೋರರ ಮೇಲೆ ಗೋಲಿಬಾರ್ ನಡೆಸಿದ್ದರು.
ಘಟನೆಗೆ ಸಂಬಂಧಿಸಿ ಬಳಿಕ ಪೊಲೀಸರು ಒಟ್ಟು 32 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಅವರಲ್ಲಿ 21 ಆರೋಪಿಗಳಿಗೆ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧೀಶ ಶರತ್ ಅರವಿಂದ್ ಬೋಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಷರತ್ತು ಬದ್ಧ ಜಾಮೀನು ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಯೊಬ್ಬ ಆರೋಪಿಗೆ 25 ಸಾವಿರ ರೂ.ಗಳ ಜಾಮೀನು ನೀಡುವಂತೆ ಸೂಚಿಸಿದೆ. ಅಲ್ಲದೆ ಪ್ರತಿ ಪರ್ಯಾಯ ಸೋಮವಾರ ಹತ್ತಿರದ ಪೊಲೀಸ್ ಠಾಣೆಗೆ ವರದಿ ಸಲ್ಲಿಸಬೇಕು ಮತ್ತು ಯಾವುದೇ ಹಿಂಸಾತ್ಮಕ ಚಟುವಟಿಕೆಗಳಲ್ಲಿ / ಸಭೆಗಳಲ್ಲಿ ಭಾಗವಹಿಸಬಾರದು ಎಂದು ಎಚ್ಚರಿಕೆ ನೀಡಿದೆ.
ಡಿಸೆಂಬರ್ 19 ರಂದು ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಹಿಂಸಾಚಾರ ನಡೆದು ಮಂಗಳೂರಿನಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್ ನಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು 21 ಮಂದಿಯನ್ನು ಬಂಧಿಸಿತ್ತು. ಈ ಎಲ್ಲಾ ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ರಾಜ್ಯ ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿತ್ತು.