ಮಂಗಳೂರು ನಗರದ ಹೊರವಲಯದ ಅಡ್ಯಾರ್ ಪದವು ಎಂಬಲ್ಲಿ ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮೃತನನ್ನು ಯಾಕುಬ್ ಎಂದು ಗುರುತಿಸಲಾಗಿದ್ದು, ಸ್ಥಳೀ ಯ ನಿವಾಸಿ ಶಾಕೀರ್ ಕೊಲೆ ಮಾಡಿದ ಆರೋಪಿ.
ಇಬ್ಬರ ಮಧ್ಯೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಗಲಾಟೆ ತಾರಕಕ್ಕೇರಿ ಶಾಕೀರ್, ಯಾಕೂಬ್ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಅಲ್ಲದೆ ನೆಲಕ್ಕೆ ದೂಡಿ ಹಾಕಿ ಎದೆಗೆ ಕಾಲಿನಿಂದ ಒದ್ದಿದ್ದಾನೆ. ಪರಿಣಾಮ ಯಾಕೂಬ್ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಆರೋಪಿಯನ್ನು ಬಂಧಿಸಲಾಗಿದ್ದು, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.