ಮಂಗಳೂರು : ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ಒದಗಿಸಿ – ಜಿಲ್ಲಾಧಿಕಾರಿ ಸೂಚನೆ

0
54
kannada news, mangalore,

ಮಂಗಳೂರು: ಕೋವಿಡ್-19ನ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೀಡಾದ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ತುರ್ತು ಕಿರುಸಾಲ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ‘ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆ’ಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾ ಲಾಕ್‌ಡೌನ್ ವೇಳೆ ಉದ್ಯೋಗ ಕಳೆದುಕೊಂಡು ಬೀದಿಬದಿ ವ್ಯಾಪಾರದಲ್ಲಿ ತೊಡಗಿದ್ದಾರೆ. ಇಂತವರಿಗೆ ಶಕ್ತಿ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಯೋಜನೆಯು ಅರ್ಹ ಫಲಾನುಭವಿಗಳಿಗೆ ಶೀಘ್ರ ತಲುಪುವಂತಾಗಬೇಕೆಂದು ಸೂಚಿಸಿದರು.

ಇದನ್ನೂ ಓದಿ : ಮಂಗಳೂರು : ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ ಕಲ್ಲಡ್ಕ ಪ್ರಭಾಕರ ಭಟ್!

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಮನಪಾ ಜಂಟಿ ಆಯುಕ್ತ ಸಂತೋಷ್ ಕುಮಾರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರವೀಣ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here