ಮಂಗಳೂರು: ವಳಚ್ಚಿಲ್ ಎಕ್ಸ್‌ಪರ್ಟ್ ಪಿಯು ಕಾಲೇಜು ವಿರುದ್ಧ ಪ್ರಕರಣ ದಾಖಲು!

0
208
Tap to know MORE!

ಮಂಗಳೂರು: ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿ ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಹಾಸ್ಟೆಲ್ ನಲ್ಲಿ ಇರಿಸಿಕೊಂಡಿದ್ದ ನಗರದ ವಳಚ್ಚಿಲ್ ಎಕ್ಸ್​ಪರ್ಟ್ ಕಾಲೇಜಿನ ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಕ್ಸ್​ಪರ್ಟ್ ಕಾಲೇಜಿನ‌ ಆಡಳಿತ ಸಂಸ್ಥೆಯ ದ್ವಿತೀಯ ಪಿಯುಸಿಯ 30 ವಿದ್ಯಾರ್ಥಿಗಳನ್ನು ವಿದ್ಯಾಸಂಸ್ಥೆಯಲ್ಲಿ ಇರಿಸಿಕೊಂಡಿದ್ದು, ಇವರ ಹೆತ್ತವರು ಹಾಗೂ ಪೋಷಕರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವ ಸಲುವಾಗಿ ದೂರದ ಊರಿನಿಂದ ಬಂದಿದ್ದರು‌.

ಇದನ್ನೂ ಓದಿ: ಮಂಗಳೂರು: ಕೆನರಾ ಕಾಲೇಜಿನಲ್ಲಿ ಪರಿಸರ ಲೆಕ್ಕಪರಿಶೋಧನೆ

ಸಂಸ್ಥೆಯವರು ರಾಜ್ಯಾದ್ಯಂತ ಕೊರೊನಾ ಕರ್ಫ್ಯೂ ಘೋಷಣೆ‌ ಮಾಡಿದ್ದರೂ ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಕಳುಹಿಸದೆ ಶೈಕ್ಷಣಿಕ ಚಟುವಟಿಕೆ ನಡೆಸಿ ಕೋವಿಡ್ ಸಾಂಕ್ರಾಮಿಕ‌ ರೋಗ ಹರಡಲು ಕಾರಣರಾಗಿದ್ದಾರೆ ಎನ್ನಲಾಗುತ್ತಿದೆ. ಆದ್ದರಿಂದ ಎಕ್ಸ್​ಪರ್ಟ್ ಕಾಲೇಜು ಆಡಳಿತ ಮಂಡಳಿಯು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿದೆ ಎಂದು ವಿದ್ಯಾ ಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್‌ ಮತ್ತು ಆಡಳಿತ ಮಂಡಳಿಯ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕಲಂ 5(1), 5(4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ ಪ್ರಕರಣ‌ ದಾಖಲಾಗಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here