ಮಂಗಳೂರು ವಿವಿ: ಕೊಂಕಣಿ ಶಿಷ್ಯವೇತನಕ್ಕೆ ಅರ್ಜಿ ಅಹ್ವಾನ

0
781
Tap to know MORE!

ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದಿಂದ ಸಂಶೋಧನೆಯನ್ನು ಕೈಗೆತ್ತಿಕೊಳ್ಳಲು ಒಂದು ಶಿಷ್ಯವೇತನಕ್ಕೆ ಅರ್ಜಿಯನ್ನು ಅಹ್ವಾನಿಸಲಾಗಿದೆ. ಶಿಷ್ಯವೇತನದ ಸ್ಥೂಲ ಸಂಶೋಧನಾ ಕ್ಷೇತ್ರ ಕೊಂಕಣಿ ಭಾಷೆ ಹಾಗೂ ಸಾಹಿತ್ಯ ವಿಷಯಕ್ಕೆ ಸಂಬಂಧಿಸಿರುತ್ತದೆ. ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಕೊಂಕಣಿ ಸ್ನಾತಕೋತ್ತರ ಪದವಿಯನ್ನು ಹೊಂದಿರತಕ್ಕದು.

ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗೆ ಯಾರೂ ಮುಂದಾಗಬೇಡಿ: ಸಿಎಂ ಯಡಿಯೂರಪ್ಪ ಮನವಿ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ನೇಮಕಾತಿಯು ತಾತ್ಕಾಲಿಕ ನೆಲೆಯಲ್ಲಿದ್ದು, ಯೋಜನೆಯ ಅವಧಿಗೆ ಮಾತ್ರ ಸೀಮಿತವಾಗಿರುತ್ತದೆ. ಸಂಶೋಧನಾ ಅನುಭವವುಳ್ಳವರಿಗೆ ಹಾಗೂ ಕೊಂಕಣಿ ಭಾಷೆ, ಸಾಹಿತ್ಯದಲ್ಲಿ ಆಳವಾದ ಜ್ಞಾನವುಳ್ಳವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್ ನ್ನು ಹಾಗೂ ಕೊಂಕಣಿ ಅಧ್ಯಯನ ಪೀಠದ ಸಂಯೋಜಕರಾದ ಡಾ. ಜಯವಂತ ನಾಯಕ್ ಅವರನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here