ಮಂಗಳೂರು ವಿವಿ ಪರೀಕ್ಷೆಗಳು ತಾತ್ಕಾಲಿಕ ರದ್ದು..!

0
292
Tap to know MORE!

ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನಾನುಕೂಲವಾಗುತ್ತಿರುವುದರಿಂದ ಹಾಗೂ ದ.ಕ ಜಿಲ್ಲೆಗೆ ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಂದ ಸೋಂಕು ಹರಡುವ ಸಾಧ್ಯತೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸುವ ದೃಷ್ಟಿಯಿಂದ ಪ್ರಸ್ತುತ ನಡೆಯುತ್ತಿರುವ ಮಂಗಳೂರು ವಿವಿ ಪದವಿ – ಸ್ನಾತಕೋತ್ತರ ಪದವಿಯ ಎಲ್ಲಾ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆದೇಶ ಹೊರಡಿಸಲಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾನ್ಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತ್ವರಿತವಾಗಿ ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಗಡಿಭಾಗದಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕಾಗಿರುವುದರಿಂದ ವಿದ್ಯಾಭ್ಯಾಸಕ್ಕಾಗಿ ದ.ಕ ಜಿಲ್ಲೆಗೆ ಆಗಮಿಸುವ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದ್ದು, ಈ ನಿಟ್ಟಿನಲ್ಲಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ

LEAVE A REPLY

Please enter your comment!
Please enter your name here