ಮಂಗಳೂರು ಸೆ.20: ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಪದವಿ ಕಾಲೇಜುಗಳ ಪರೀಕ್ಷೆ ನಡೆಸಲು ಅಡಚನೆಯುಂಟಾಗಿದ್ದು, ಸೆಪ್ಟೆಂಬರ್ 21 ರಂದು ನಡೆಯಲಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಈ ಕುರಿತಂತೆ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಡಾ| ಪಿ.ಎಲ್.ಧರ್ಮ ಪ್ರಕಟಣೆ ಹೊರಡಿಸಿದ್ದು, ನಾಳೆ (ಸೆ.21) ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು” ಎಂದು ತಿಳಿಸಿದ್ದಾರೆ.

ಧಾರಾಕಾರ ಗಾಳಿ-ಮಳೆಯಿಂದಾಗಿ ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ರಸ್ತೆ ಸಂಚಾರವೂ ಬಂದ್ ಆಗಿರುವ ಪರಿಣಾಮ, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಬರಲು ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ಪರೀಕ್ಷೆ ನಡೆಸುವುದು ಕಷ್ಟವಾದ್ದರಿಂದ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.