ಮಂಡ್ಯ : ಮಹಡಿಯಿಂದ ಕೆಳಗೆ ಬಿದ್ದು ಮೂರು ವರ್ಷದ ಮಗು ಸಾವು!

0
188
Tap to know MORE!

ಮಂಡ್ಯ, ಅ 7: ತನ್ನ ಮೂರು ವರ್ಷದ ಮಗುವಿಗೆ ಊಟ ಮಾಡಿಸಿ ತಾಯಿ ಕೈ ತೊಳೆಯಲು ಮನೆಯೊಳಗೆ ಹೋದ ವೇಳೆ ಆ ಕಂದಮ್ಮ ಮಹಡಿಯ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿ. ಸತೀಶ್ ಅವರದ್ದು ಮಹಡಿ ಮನೆಯಾಗಿದ್ದು, ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ ಊಟ ಮಾಡಿಸಿದ್ದಾರೆ. ನಂತರ ಮಗುವನ್ನು ಬಿಟ್ಟು ಕೈ ತೊಳೆಯಲು ಒಳಗೆ ಹೋಗಿದ್ದಾರೆ.

ಈ ವೇಳೆ ಮಹಡಿಯ ಮೇಲಿನ ಸಂಧಿಯಲ್ಲಿ ಮಗು ಇಣುಕಿ ನೋಡಲು ಹೋಗಿದ್ದ, ಆಗ ಮಗು ಮುಗ್ಗರಿಸಿ ಕೆಳಗೆ ಬಿದ್ದಿದೆ. ಮೇಲಿಂದ ಬಿದ್ದ ರಭಸಕ್ಕೆ ಮಗುವಿನ ತಲೆಯ ಭಾಗಕ್ಕೆ ಗಂಭೀರವಾಗಿ ಪೆಟ್ಟು ಬಿದ್ದಿದೆ. ತಕ್ಷಣ ಪೋಷಕರು ಮಗುವನ್ನು ಕರೆದುಕೊಂಡು ಮೂರು ಖಾಸಗಿ ಆಸ್ಪತ್ರೆಗಳಿಗೆ ಅಲೆದಾಡಿದ್ದಾರೆ. ಆದರೆ ಸೂಕ್ತ ಚಿಕಿತ್ಸೆ ಸಿಗದ ಕಾರಣ ಮಗು ಸಾವನ್ನಪ್ಪಿದೆ.

ಮಂಡ್ಯದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here