ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಶರವೇಗದಲ್ಲಿ ಏರುತ್ತಿದ್ದು, ಸಾಮಾನ್ಯ ಜನರಿಂದ ಹಿಡಿದು ಕ್ರೀಡಾಪಟುಗಳು, ಸಿನಿಮಾ ತಾರೆಯರು, ರಾಜಕಾರಣಿಗಳಿಗೂ ಸೋಂಕು ತಗುಲುತ್ತಿದೆ. ಇಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಗೂ ಕೋವಿಡ್ ಸೋಂಕು ದೃಢ ಪಟ್ಟಿರುವುದು, ಅವರಿಗಲ್ಲದೆ ಅವರ ಸಂಪರ್ಕಕ್ಕೆ ಬಂದವರಿಗೂ ಆತಂಕ ಹೆಚ್ಚಿಸಿದೆ.
ಈ ಕುರಿತು ಸ್ವತಃ ಸಂಸದೆ ಟ್ವಿಟ್ಟರ್ ನಲ್ಲಿ ಇದರ ಕುರಿತು ವಿಷಯ ಹಂಚಿಕೊಂಡಿದ್ದಾರೆ. ಸರಣಿ ಟ್ವೀಟ್ ಗಳಲ್ಲಿ ಅವರು ಇದರ ಕುರಿತು ಹೇಳಿದ್ದಾರೆ ಹಾಗೂ ಗುಣಮುಖರಾಗುವ ಬಗ್ಗೆ ಆತ್ಮವಿಶ್ವಾಸವನ್ನೂ ಹೊಂದಿದ್ದಾರೆ.
ಆತ್ಮೀಯರೆ,
ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. (1/n)— Sumalatha Ambareesh ಸುಮಲತಾ ಅಂಬರೀಶ್ (@sumalathaA) July 6, 2020
ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ.
ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. (2/n)
— Sumalatha Ambareesh ಸುಮಲತಾ ಅಂಬರೀಶ್ (@sumalathaA) July 6, 2020
ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ. ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿದ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ.
ನಿಮ್ಮ ಹಾರೈಕೆ ಇರಲಿ.
(3/3)— Sumalatha Ambareesh ಸುಮಲತಾ ಅಂಬರೀಶ್ (@sumalathaA) July 6, 2020