ಮಂಗಳೂರು ವಿವಿ ಕಾಲೇಜಿನಲ್ಲಿ ಮಕ್ಕಳ ಹಕ್ಕು, ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಕ್ರಮ

0
75
Tap to know MORE!

ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ ಮತ್ತು ಶಕ್ತಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ, ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಗಳು ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಇತ್ತೀಚೆಗೆ “ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯಿದೆ ” ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಿದ್ದರು.

ಶಕ್ತಿ ಶಿಕ್ಷಣ ಸಂಸ್ಥೆಯ ಮುಖ್ಯ ಸಲಹೆಗಾರ ರಮೇಶ್ ಉದ್ಘಾಟನೆ ನೆರವೇರಿಸಿದರು. ಸಮಾಜಕಾರ್ಯ ವಿಭಾಗ ಮುಖ್ಯಸ್ಥ  ಪ್ರೊ.ಪೌಲ್ ಜಿ  ಅಕ್ವಿನಸ್‌, ಸಹಾಯಕ ಪ್ರಾಧ್ಯಾಪಕ ಡಾ.  ಯಶಸ್ವಿನಿ ಬಟ್ಟಂಗಾಯ ಕಾರ್ಯಕ್ರಮದ  ಮುಖ್ಯ ಅತಿಥಿಗಳಾಗಿದ್ದರು. ಮಕ್ಕಳ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆಯ ಕುರಿತಾಗಿ  ಮಕ್ಕಳ ಸಹಾಯವಾಣಿಯ ಸಂಯೋಜಕರಾದ ದೀಕ್ಷಿತ್ ಮತ್ತು ಅಸುಂತಾ ಡಿ ಸೋಜಾ ಜಾಗೃತಿ ಮೂಡಿಸಿದರು.

ಇದನ್ನೂ ಓದಿ: ಮಂಗಳೂರು: ವಿವಿ ಕಾಲೇಜಿನಲ್ಲಿ ʼಕ್ಯಾಂಪಸ್ ಕ್ಲೀನ್ ಡ್ರೈವ್ʼ

ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ  ವಿದ್ಯಾ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿನಿ ಆದಿತ್ಯ ವಂದನಾರ್ಪಣೆಗೈದರೆ, ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

LEAVE A REPLY

Please enter your comment!
Please enter your name here