ಇಡೀ ಮನುಕುಲಕ್ಕೆ ಸ್ವಾಮಿ ವಿವೇಕಾನಂದರ ಬೋಧನೆಗಳು ಸ್ಪೂರ್ತಿ : ಸುನಿಲ್ ಕೈಯ್ಯಾರ್

0
113
Tap to know MORE!

ಹಳೆಯಂಗಡಿ ಜ.14: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಆಶ್ರಯದಲ್ಲಿ  “ದಿವ್ಯಚೇತನ ಸ್ವಾಮಿ ವಿವೇಕಾನಂದರ 158 ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ” ಕಾರ್ಯಕ್ರಮವು ಮಂಗಳವಾರ ಜರುಗಿತು.

ಮುಖ್ಯ ಉಪನ್ಯಾಸಕರಾಗಿ ಭಾಗವಹಿಸಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾಲೇಜು ವಿದ್ಯಾರ್ಥಿ ಪ್ರಮುಖ್ ಆಗಿರುವ ಸುನಿಲ್ ಕೈಯಾರ್ ಇವರು ಸ್ವಾಮಿ ವಿವೇಕಾನಂದರ ಬಗ್ಗೆ ಸವಿಸ್ತಾರವಾಗಿ ಮಾತನಾಡುತ್ತ ವಿವೇಕಾನಂದರು ಇಡೀ ಮನುಕುಲಕ್ಕೆ ಅವರೊಬ್ಬ ಸ್ಪೂರ್ತಿ. ವಿಶೇಷವಾಗಿ ಯುವಜನತೆಗೆ ಅವರು ಭಾರತದ ಆಧ್ಯಾತ್ಮಿಕ ಪರಂಪರೆಯನ್ನು ಪುನರುಜ್ಜೀವನಗೊಳಿಸಿದರು ಮತ್ತು ಅದನ್ನು ಜಾಗತಿಕ ರಂಗದಲ್ಲಿ ಕೇಂದ್ರೀಕರಿಸಿದರು. ಅವರ ಬೋಧನೆಗಳು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇವೆ ಎಂದು ತಿಳಿಸಿದರು.

ಇದನ್ನೂ ಓದಿ: ಹಳೆಯಂಗಡಿ : ಯುವಕ ಮಂಡಲದಲ್ಲಿ “ಪೇಪರ್ ಕ್ರಾಫ್ಟ್ ಕಾರ್ಯಾಗಾರ”

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಇದರ ಅಧ್ಯಕ್ಷರಾದ ಹರಿದಾಸ್ ಭಟ್ ತೋಕೂರು ಇವರು ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಶುಭಾಶಯ ಕೋರುತ್ತಾ ಯುವಕ ಯುವತಿಯರು ಯುಠವಕ ಮಂಡಲ, ಸಂಘ-ಸಂಸ್ಥೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಲ್ಲಿ ಸಮಾಜ ಗುರುತಿಸುತ್ತದೆ. ತಾವು ಕೂಡ 25 ವರ್ಷಕ್ಕಿಂತಲೂ ಹೆಚ್ಚು ಸಮಯವನ್ನು ತೋಕೂರು ಯುವಕ ಮಂಡಲ ಹಾಗೂ ಇತರ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು ಈ ಮೂಲಕ ಊರಿನ ಸುಬ್ರಮಣ್ಯ ದೇವರ ಸೇವೆ ಮಾಡಲು ಅವಕಾಶ ದೊರಕಿದೆ. ದೇವಸ್ಥಾನದ ಜೀರ್ಣೋದ್ಧಾರ ದಲ್ಲಿ ಎಲ್ಲಾ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ತಿಳಿಸಿದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕಾರ್ಯಕ್ರಮದ ಮೊದಲಿಗೆ ಯುವಕ ಮಂಡಲದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಅತಿಥಿಗಳು ಮಾಲಾರ್ಪಣೆ ಮಾಡುವ ಮೂಲಕ ದಿವ್ಯಚೇತನ ಸ್ವಾಮಿ ವಿವೇಕಾನಂದರ 158ನೇ ಜನ್ಮ ದಿನಾಚರಣೆಗೆ ಚಾಲನೆ ನೀಡಲಾಯಿತು.

ಯುವಕ ಮಂಡಲದ ಕಾರ್ಯಕಾರಿ ಸಮಿತಿ ಸದಸ್ಯರಾದ ಹಿಮಕರ್ ಕೋಟ್ಯಾನ್ ವೈಯಕ್ತಿಕ ಗೀತೆ ಹಾಡಿದರು. ಸದಸ್ಯರಾದ ಪುಂಡಲೀಕ ಶೆಣೈ ಇವರು ಅಮೃತ ವಚನ ನುಡಿದರು.

ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಸುಧಾಕರ ಆರ್ ಅಮೀನ್, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಸದಾಶಿವ ಅಂಚನ್, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ ಅಶ್ರಫ್, ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ದಿವ್ಯಶ್ರೀ ರಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು.

ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದರು.

ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ಯತೀಶ್ ಕೋಟ್ಯಾನ್ ಅತಿಥಿಗಳನ್ನು ಸ್ವಾಗತಿಸಿದರು. ಯುವತಿ ಮಂಡಲದ ಅಧ್ಯಕ್ಷರಾದ ಕುಮಾರಿ ದಿವ್ಯಶ್ರೀ ರಮೇಶ್ ಕೋಟ್ಯಾನ್ ಧನ್ಯವಾದ ಅರ್ಪಿಸಿದರು. ಯುವತಿ ಮಂಡಲದ ಸದಸ್ಯರು ಪ್ರಾರ್ಥನೆ ಸಲ್ಲಿಸಿದರು.

ಕಡಿಮೆ ಖರ್ಚಿನಲ್ಲಿ ಗುಣಮಟ್ಟದ ಚಿಕಿತ್ಸೆ ಪಡೆಯಲು ಆಯುಷ್ಮಾನ್ ಭಾರತ್ ಗುರುತಿನ ಚೀಟಿ ಸಹಕಾರಿ: ಶಾಸಕ ಕೋಟ್ಯಾನ್

LEAVE A REPLY

Please enter your comment!
Please enter your name here