ಮೊದಲ ಬಾರಿಗೆ ಶಾಸಕರಾದ ಮಾಜಿ ಕ್ರಿಕೆಟಿಗ ಮನೋಜ್ ತಿವಾರಿ ಈಗ ಬಂಗಾಳದ ಕ್ರೀಡಾ ಸಚಿವ!

0
178
Tap to know MORE!

ಕೋಲ್ಕತ(ಮೇ.11): ಇತ್ತೀಚೆಗಷ್ಟೇ ಮುಕ್ತಾಯವಾದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅತಿಹೆಚ್ಚು ಕುತೂಹಲ ಕೆರಳಿಸಿದ್ದ ವಿಧಾನಸಭಾ ಚುನಾವಣೆ ಎಂದರೆ ಅದು ಪಶ್ಚಿಮ ಬಂಗಾಳ ಚುನಾವಣೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಎಲ್ಲಾ ಸಮೀಕ್ಷೆಗಳನ್ನು ಮೀರಿ 3ನೇ ಬಾರಿಗೆ ಬಂಗಾಳದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ.

3ನೇ ಬಾರಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮಮತಾ ಬ್ಯಾನರ್ಜಿ

ಇದೀಗ ಕೋಲ್ಕತದ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ 43 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಪೈಕಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಮಾಜಿ ಕ್ರಿಕೆಟಿಗ ಮನೋಜ್‌ ತಿವಾರಿಗೂ ಅದೃಷ್ಟ ಖುಲಾಯಿಸಿದ್ದು, ರಾಜ್ಯದ ಕ್ರೀಡಾಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಶಿವ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮನೋಜ್ ತಿವಾರಿ, ಬಿಜೆಪಿಯ ರತನ್ ಚಕ್ರವರ್ತಿ ವಿರುದ್ದ 6 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಮನೋಜ್ ತಿವಾರಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಕುರಿತಂತೆ ಟ್ವೀಟ್‌ ಮಾಡಿರುವ ಮನೋಜ್ ತಿವಾರಿ, ”ಹೊಸ ದಾರಿ ಆರಂಭವಾಗಿದೆ” ಎಂದು ಬರೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here