ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಬಿಎಸ್‌ವೈ ಸಮ್ಮತಿ | ಡಿ.5 ರಂದು ಬಂದ್ ಮಾಡುವ ಎಚ್ಚರಿಕೆ ನೀಡಿದ ಕನ್ನಡ ಸಂಘಟನೆಗಳು!

0
117
Tap to know MORE!

ಬೆಂಗಳೂರು, ನವೆಂಬರ್ 17: ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆ ಮಾಡಲು ಒಪ್ಪಿಗೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಸರ್ಕಾರದ ಈ ನಿರ್ಧಾರದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಖಂಡಿಸಿದ್ದಾರೆ. ಸರ್ಕಾರ ತನ್ನ ತೀರ್ಮಾನವನ್ನು ವಾಪಸ್ ಪಡೆಯದಿದ್ದರೆ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.

“ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಆದೇಶ ವಾಪಸ್ ಪಡೆಯಲು ನವೆಂಬರ್ 27ರ ತನಕ ಸರ್ಕಾರಕ್ಕೆ ಗಡುವು ನೀಡುತ್ತೇನೆ. ಸರ್ಕಾರ ಆದೇಶ ವಾಪಸ್ ಪಡೆಯದಿದ್ದರೆ ಕನ್ನಡ ಒಕ್ಕೂಟದಿಂದ ಕರ್ನಾಟಕ ಬಂದ್ ನಡೆಸಲಾಗುತ್ತದೆ” ಎಂದು ವಾಟಾಳ್ ನಾಗರಾಜ್ ಹೇಳಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನವೆಂಬರ್ 13ರಂದು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲು ಆದೇಶ ನೀಡಿದ್ದರು. ರಾಜ್ಯದಲ್ಲಿ ಮರಾಠಾ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಇರುವುದರಿಂದ ಪ್ರಾಧಿಕಾರ ರಚನೆ ಮಾಡಲು ಆದೇಶ ನೀಡಲಾಗಿದೆ.

ಮಹಾರಾಷ್ಟ್ರ ಬಂದ್‌ ಹಿಂಪಡೆದ ಮರಾಠ ಸಂಘಟನೆಗಳು
ಸಮಾಜದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಅಭಿವೃದ್ಧಿ ಇತ್ಯಾದಿಗಳಿಗಾಗಿ ಪ್ರಾಧಿಕಾರವನ್ನು ಸ್ಥಾಪನೆ ಮಾಡುವುದು, ಸದರಿ ಪ್ರಾಧಿಕಾರ ರಚನೆಗಾಗಿ ₹50 ಕೋಟಿ ಅನುದಾನವನ್ನು ಆರ್ಥಿಕ ಇಲಾಖೆ ಸಹಮತದೊಂದಿಗೆ ಮೀಸಲಿಡಲು ಆದೇಶ ನೀಡಲಾಗಿದೆ.

LEAVE A REPLY

Please enter your comment!
Please enter your name here