ಮಹಾರಾಷ್ಟ್ರದಲ್ಲಿ 13 ನಕ್ಸಲರ ಹತ್ಯೆ

0
332
Tap to know MORE!

ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಪೊಲೀಸ್‌ ಪಡೆಯ ಸಿ–60 ಕಮಾಂಡೊಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಇದರಲ್ಲಿ ಕನಿಷ್ಠ 13 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಎಟಪಲ್ಲಿಯ ಕೊಟ್ಟಾಮಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ನಕ್ಸಲರು ಸಭೆ ಸೇರಿದ್ದ ಸಂದರ್ಭದಲ್ಲಿ ಎನ್‌ಕೌಂಟರ್‌ ನಡೆದಿದೆ ಎಂದು ಡಿಐಜಿ ಸಂದೀಪ್‌ ಪಾಟೀಲ್‌ ಅವರು ಮಾಹಿತಿ ನೀಡಿದರು.

ಸಿ–60 ಕಮಾಂಡೊಗಳನ್ನು ಒಳಗೊಂಡ ಪೊಲೀಸ್‌ ಪಡೆಯು ಶೋಧ ಕಾರ್ಯಾಚರಣೆಯನ್ನು ನಡೆಸಿದೆ. ಈ ವೇಳೆ ನಕ್ಸಲರು ಮೊದಲು ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿಯಾಗಿ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಈ ನಡುವೆ ಕೆಲವು ನಕ್ಸಲರು ಅಲ್ಲಿಂದ ಪರಾರಿಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಅಂಕಿತ್‌ ಗೋಯಲ್‌ ಅವರು ಹೇಳಿದರು.

LEAVE A REPLY

Please enter your comment!
Please enter your name here