ಬೆಂಗಳೂರು : ಕಾನೂನು ಮತ್ತು ಸಂಸದೀಯ ಸಚಿವ ಜೆಸಿ ಮಾಧುಸ್ವಾಮಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಖಾಸಗೀ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ತಮಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದಂತವರಿಗೆ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಜೆ.ಸಿ.ಮಾಧುಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸುದ್ದಿ ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಿ ತಮ್ಮ ಎಂದಿನ ಕರ್ತವ್ಯಗಳಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ.@JCMBJP
— Dr Sudhakar K (@mla_sudhakar) September 28, 2020