ಮುಂದಿನ 15-20 ದಿನಗಳಲ್ಲಿ ಸಿಇಟಿ ಫಲಿತಾಂಶ ಪ್ರಕಟ : ಡಾ|ಅಶ್ವಥ್ ನಾರಾಯಣ್

0
61

ಬೆಂಗಳೂರು : ರಾಜ್ಯಾದ್ಯಂತ ನಿನ್ನೆ ಮುಕ್ತಾಯವಾದ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಮುಂದಿನ 15-20 ದಿನಗಳೊಳಗೆ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ್ ತಿಳಿಸಿದರು.

ಆನ್‌ಲೈನ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಒಟ್ಟು 1,94,419 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು ಎಂದು ಹೇಳಿದರು. ಶೇ.90.23 ರಷ್ಟು ವಿದ್ಯಾರ್ಥಿಗಳು ( 1,75,428) ಭೌತಶಾಸ್ತ್ರ ಪರೀಕ್ಷೆಗೆ ಹಾಜರಾಗಿದ್ದರೆ, ಶೇ.90.19 ವಿದ್ಯಾರ್ಥಿಗಳು (1,75,337) ರಸಾಯನಶಾಸ್ತ್ರ ಪರೀಕ್ಷೆಯನ್ನು ಬರೆದಿದ್ದಾರೆ ಎಂದು ಅವರು ಹೇಳಿದರು. ಕಳೆದ ವರ್ಷ ಶೇಕಡಾ 92.27 ರಷ್ಟು ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆಗೆ ಮತ್ತು 90.88 ರಷ್ಟು ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಶುಕ್ರವಾರ ಸಂಜೆ ಯಶಸ್ವಿಯಾಗಿ ಕೊನೆಗೊಂಡಿತು. ಕೊರೊನಾವೈರಸ್ ಸೋಂಕಿಗೆ ಒಳಗಾದ 63 ಮಂದಿ ಸೇರಿದಂತೆ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಪೈಕಿ ಶೇ. 90 ಪ್ರತಿಶತ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಮತ್ತು ಭೌತಶಾಸ್ತ್ರ ಪರೀಕ್ಷೆಗಳಿಗೆ ಹಾಜರಾಗಿದ್ದರು.

LEAVE A REPLY

Please enter your comment!
Please enter your name here