BREAKING | ಉಪಚುನಾವಣೆ: ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು!

0
149
ಮುನಿರತ್ನ, ಬಿಜೆಪಿ
Tap to know MORE!

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಆರಂಭಿಕ ಹಂತದಲ್ಲೇ ಭಾರೀ ಅಂತರದ ಮುನ್ನಡೆಯನ್ನು ಸಾಧಿಸುತ್ತಾ ಬಂದ ಮುನಿರತ್ನ ಎಲ್ಲೂ ಅಂತರ ಬಿಟ್ಟುಕೊಟ್ಟಿರಲಿಲ್ಲ. ಒಟ್ಟು 25 ಸುತ್ತುಗಳ ಮತ ಎಣಿಕೆ ನಡೆಯುತ್ತಿದ್ದು ಈ ಪೈಕಿ 20 ಸುತ್ತುಗಳ ಮತ ಎಣಿಕೆ ಮುಕ್ತಾಯಗೊಂಡಿದೆ.

ಆರ್‌ ಆರ್‌ ನಗರದಲ್ಲಿ ಒಟ್ಟು 2,09,828 ಮತಗಳು ಚಲಾವಣೆಯಾಗಿವೆ. ಈ ಪೈಕಿ ಮುನಿರತ್ನ ಅವರು 88,196 ಮತಗಳನ್ನು ಪಡೆದುಕೊಂಡಿದ್ದಾರೆ. ಒಟ್ಟು 38,288 ಮತಗಳ ಅಂತದಲ್ಲಿ ಮುನ್ನಡೆಯಲ್ಲಿದ್ದಾರೆ.
ಅಂಕಿ ಅಂಶಗಳನ್ನು ಗಮನಿಸಿದರೆ ಮುನಿರತ್ನ ಗೆಲುವು ಖಚಿತವಾಗಿದೆ. ಮುನಿರತ್ನ ವಿರುದ್ಧ ಸ್ಪರ್ಧೆ ನಡೆಸಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಎಚ್‌ 17 ನೇ ಸುತ್ತಿನಲ್ಲಿ 49908 ಮತಗಳನ್ನು ಪಡೆದುಕೊಂಡಿದ್ದಾರೆ.

ಅಭಿಮಾನಿಗಳಲ್ಲಿ ಸಂಭ್ರಮ

ಮುನಿರತ್ನ ಭಾರೀ ಅಂತರದ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಮತಎಣಿಕೆ ಕೇಂದ್ರದ ಹೊರಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುನಿರತ್ನ ಅಭಿಮಾನಿಗಳು ಗೆಲುವಿನ ಸಂಭ್ರಮಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಡಿಕೆ ಸಹೋದರರಿಗೆ ಮುಖಭಂಗ

ಆರ್‌ ಆರ್‌ ನಗರ ಉಪಚುನಾವಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿದ್ದರು. ಇದು ಡಿಕೆ ಸಹೋದರರು ಹಾಗೂ ಮುನಿರತ್ನ ನಡುವಿನ ಫೈಟ್ ಎಂದೇ ಬಿಂಬಿತವಾಗಿತ್ತು. ಆದರೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭಾರೀ ಅಂತರದಿಂದ ಸೋಲನ್ನು ಅನುಭವಿಸಿದ್ದಾರೆ. ಈ ಮೂಲಕ ಡಿಕೆ ಸಹೋದರರಿಗೆ ಇದು ಭಾರೀ ಹಿನ್ನಡೆಯಾದಂತಾಗಿದೆ.

LEAVE A REPLY

Please enter your comment!
Please enter your name here