BREAKING | ಖ್ಯಾತ ಉದ್ಯಮಿ, ಮುರುಡೇಶ್ವರದ ಶಿವನ ಪ್ರತಿಮೆಯ ನಿರ್ಮಾತೃ ಆರ್.ಎನ್.ಶೆಟ್ಟಿ ಇನ್ನಿಲ್ಲ!

0
86
Tap to know MORE!

ಬೆಂಗಳೂರು; ಆರ್.ಎನ್.ಎಸ್. ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಗುರುವಾರ ಡಿ.17ರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.

ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು. ಬಳಿಕ ಅಂತ್ಯಸಂಸ್ಕಾರವನ್ನು ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಜೂಜಾಟದಲ್ಲಿ ಪತ್ನಿಯನ್ನೇ ಅಡವಿಟ್ಟು ಸೋತ ಪತಿ | ಬಳಿಕ ಆಕೆಯ ಮೇಲೆ ಆ್ಯಸಿಡ್ ದಾಳಿ!

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು, ಮುರುಡೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತಾಧಿಯಾಗಿ ಈ ಸ್ಥಳವನ್ನು ಪ್ರೇಕ್ಷಣೀಯ ಕ್ಷೇತ್ರವನ್ನಾಗಿ ಪರಿವರ್ತಿಸಿದ ಕೀರ್ತಿ ಅವರದು. ಮುರುಡೇಶ್ವರದ ಸಮುದ್ರ ತೀರದಲ್ಲಿ 123 ಅಡಿ ಎತ್ತರದ ಶಿವನ ಪ್ರತಿಮೆಯನ್ನು ಸ್ಥಾಪಿಸಿದ್ದರು.

ಆರ್ ಎನ್ ಶೆಟ್ಟಿ ಅವರು ಉದ್ಯಮಿಯಾಗಿ ಬಹುದೊಡ್ಡ ಹೆಸರು ಮಾಡಿದ್ದರು. 1967ರಲ್ಲಿ ಪಾಲುದಾರ ಕಂಪೆನಿಯಾದ ಆರ್ ಎನ್ ಶೆಟ್ಟಿ ಆಂಡ್ ಕಂಪೆನಿ ಆರಂಭಿಸಿದ್ದರು. ಕಂಪೆನಿ ಮೂಲಕ ಅನೇಕ ಸೇತುವೆ, ಅಣೆಕಟ್ಟುಗಳು, ಕಟ್ಟಡಗಳ ನಿರ್ಮಾಣ ಕಾರ್ಯ ಮಾಡಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.

ತಿರುಪತಿ: ಕೋವಿಡ್-19 ನಿಯಮಗಳು ಇನ್ನಷ್ಟು ಸಡಿಲ – ದೇವರ ದರ್ಶನಕ್ಕೆ ಎಲ್ಲರಿಗೂ ಅವಕಾಶ

LEAVE A REPLY

Please enter your comment!
Please enter your name here