ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ

0
128
Tap to know MORE!

ಮೈಸೂರು: ಚಾಮುಂಡಿಬೆಟ್ಟದಲ್ಲಿ ವಿಶ್ವವಿಖ್ಯಾತ 410ನೇ ನಾಡಹಬ್ಬ ಮೈಸೂರು ದಸರಾಗೆ ಇಂದು ವಿದ್ಯುಕ್ತ ಚಾಲನೆ ನೀಡಲಾಯಿತು. ಕೊರೊನಾ ವಾರಿಯರ್ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ 2020ರ ಜಗದ್ವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದರು.

ಶುಭ ತುಲಾ ಲಗ್ನದಲ್ಲಿ ಮೈಸೂರು ದಸರಾವನ್ನು ಉದ್ಘಾಟನೆ ಮಾಡಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವರು ಉದ್ಘಾಟಕರಿಗೆ ಜೊತೆಯಾದರು. ಕೊರೊನಾ ಹಿನ್ನೆಲೆ ಕಡಿಮೆ ಜನರಿಗೆ ದಸರಾ ಮಹೋತ್ಸವಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ.

ದಸರಾ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಯಡಿಯೂರಪ್ಪ, ಉದ್ಘಾಟಕರಾದ ಡಾ.ಮಂಜುನಾಥ್ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದರು. ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಎಸ್‌ಟಿ.ಸೋಮಶೇಖರ್ ಸಚಿವರಾದ ಹೆಚ್.ವಿಶ್ವನಾಥ್, ಬಿಸಿ.ಪಾಟೀಲ್, ಶಾಸಕರಾದ ಜಿಟಿ.ದೇವೇಗೌಡ, ಹರ್ಷವರ್ಧನ್, ಎಸ್‌ಎ.ರಾಮ್‌ದಾಸ್, ಸಂಸದ ಪ್ರತಾಪ್ ಸಿಂಹ ಸೇರಿ ಗಣ್ಯರು ಭಾಗಿಯಾಗಿದ್ದರು.

ದಸರಾ ಉದ್ಘಾಟನಾ ವೇದಿಕೆಯಲ್ಲಿ ಕೊರೊನಾ ವಾರಿಯರ್ಸ್ ಗಳಾದ ವೈದ್ಯಾಧಿಕಾರಿ ಡಾ.ನವೀನ್ ಟಿ.ಆರ್, ಹಿರಿಯ ಶುಶ್ರುಷಾಧಿಕಾರಿ ಶ್ರೀಮತಿ ರುಕ್ಮಿಣಿ, ಪೊಲೀಸ್ ಪೇದೆ ಕುಮಾರ್ ಪಿ., ಪೌರಕಾರ್ಮಿಕರಾದ ಶ್ರೀಮತಿ ಮರಗಮ್ಮ, ಆಶಾ ಕಾರ್ಯಕರ್ತೆ ಶ್ರೀಮತಿ ನೂರ್ಜಾನ್ ಹಾಗೂ ಸಮಾಜ ಸೇವಕ ಆಯೂಬ್ ಅಹ್ಮದ್ ಅವರಿಗೆ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here