ಮೊಬೈಲ್ ಬಳಸಬೇಡ ಅಂದಿದ್ದಕ್ಕೆ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ!

0
80

ಮೈಸೂರು: ಮೊಬೈಲ್ ಹೆಚ್ಚು ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಮೈಸೂರಿನ ಎನ್.ಆರ್.ಮೊಹಲ್ಲಾದ ಶಿವಾಜಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ನಿಕಾನ್(19) ಅತ್ಮಹತ್ಯೆಗೆ ಶರಣಾದ ವಿಧ್ಯಾರ್ಥಿನಿ. ಮೊಬೈಲ್ ಹೆಚ್ಚಾಗಿ ಬಳಸಬೇಡ ಎಂದು ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಯುವತಿ ನೇಣು ಬಿಗಿದುಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.

ಇದನ್ನೂ ನೋಡಿ : ಎರಡು ವರ್ಷಗಳ ಪ್ರೀತಿ ಆತ್ಮಹತ್ಯೆಯಲ್ಲಿ ಅಂತ್ಯ!

ನಿಕಾನ್ ವಿದ್ಯಾಶ್ರಮ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ದ್ವಿತೀಯ ಪಿಯುಸಿ ಓದುತ್ತಿದ್ದಾಳೆ. ಬುದ್ಧಿವಾದ ಹೇಳಿದ್ದನ್ನೇ ತಲೆಗೆ ಹಚ್ಚಿಕೊಂಡು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here