ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಕೋವಿಡ್ ಟೆಸ್ಟ್ ನಡೆಸಿ: ಪ್ರಧಾನಿ ಮೋದಿ ಆದೇಶ

0
289
Tap to know MORE!

ನವದೆಹಲಿ: ದೇಶದಲ್ಲಿ ಕೋವಿಡ್‌–19ರ ಪರಿಸ್ಥಿತಿ ಮತ್ತು ಲಸಿಕಾ ಅಭಿಯಾನದ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಂದ ವಿವರವಾಗಿ ಮಾಹಿತಿ ಪಡೆದಿದ್ದಾರೆ. ಆ ಬಳಿಕ ಅಧಿಕಾರಿಗಳಿಗೆ ಹಲವು ಪ್ರಮುಖ ಸೂಚನೆಗಳನ್ನು ಮೋದಿ ನೀಡಿದ್ದಾರೆ.

‘ಕೋವಿಡ್‌ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಕಂಟೈನ್‌ಮೆಂಟ್ ಜೋನ್‌ಗಳನ್ನು ನಿರ್ಮಿಸುವ ಅವಶ್ಯಕತೆ ಇದೆ. ಅಧಿಕ ಪ್ರಕರಣಗಳು ಕಂಡುಬಂದಿರುವ ಸ್ಥಳಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕಿದೆ’ ಎಂದು ಮೋದಿ ತಿಳಿಸಿದ್ದಾರೆ.

ಕೋವಿಡ್ ‘POSITIVE’: 10 ದಿನ ವೆಂಟಿಲೇಟರ್ ಸಹಾಯದಲ್ಲಿದ್ದರೂ ಕೊರೋನಾ ಗೆದ್ದ 1 ತಿಂಗಳ ಹೆಣ್ಣುಮಗು!

‘ಗ್ರಾಮೀಣ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಪರೀಕ್ಷೆಗಳನ್ನು ನಡೆಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಸಂಪನ್ಮೂಲಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಪ್ರತ್ಯೇಕ ವಾಸ, ದೈಹಿಕ ಅಂತರ, ಮಾಸ್ಕ್‌ ಧರಿಸುವುದು ಮತ್ತು ಚಿಕಿತ್ಸೆ ಪಡೆಯುವುದರ ಬಗ್ಗೆ ಹಳ್ಳಿಗಳಲ್ಲಿ ತಿಳುವಳಿಕೆ ನೀಡಬೇಕು. ಸುಲಭ ಭಾಷೆಯಲ್ಲಿ ಕೋವಿಡ್‌ ಮಾರ್ಗಸೂಚಿಗಳು ಲಭ್ಯವಾಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು’ ಪ್ರಧಾನಿ ಆದೇಶಿಸಿದ್ದಾರೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

‘ಗ್ರಾಮೀಣ ಪ್ರದೇಶಗಳಲ್ಲಿ ಆಮ್ಲಜನಕದ ಪೂರೈಕೆಯನ್ನು ಖಾತ್ರಿಪಡಿಸುವ ವಿತರಣಾ ಯೋಜನೆಯನ್ನು ರೂಪಿಸಬೇಕು. ಅಂತಹ ಸಲಕರಣೆಗಳ ಕಾರ್ಯಾಚರಣೆಯಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯವಾದ ತರಬೇತಿಯನ್ನು ನೀಡಬೇಕು. ವೈದ್ಯಕೀಯ ಸಾಧನಗಳ ಸುಗಮ ಕಾರ್ಯಾಚರಣೆಗೆ ವಿದ್ಯುತ್ ಸರಬರಾಜಿನ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು’ ಎಂದು ಪ್ರಧಾನಿ ನಿರ್ದೇಶನ ನೀಡಿದ್ದಾರೆ.

ನೈಜ ಸ್ವಭಾವ ಕಂಡುಕೊಂಡಾಗ ಮಾತ್ರ ಶ್ರೇಷ್ಠ ವ್ಯಕ್ತಿತ್ವ ನಿರ್ಮಾಣ ಸಾಧ್ಯ : ಸ್ವಾಮಿ ಬೋಧಮಯಾನಂದಜಿ

ಲಸಿಕೆ ಲಭ್ಯತೆ ಮತ್ತು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here