BIG NEWS | ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ !

0
164
Tap to know MORE!

ಬೆಂಗಳೂರು ಡಿ 23 : ಬ್ರಿಟನ್ ಸಹಿತ ವಿವಿಧ ದೇಶಗಳಲ್ಲಿ ರೂಪಾಂತರ ಹೊಂದಿರುವ ಕೊರೊನಾ ವೈರಸ್ ಶರವೇಗದಲ್ಲಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಸರಕಾರ ಕೂಡ ಹಲವು ಮುನ್ನೆಚರಿಕೆ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕದಲ್ಲಿ ಇಂದಿನಿಂದ ರಾತ್ರಿ 11 ರಿಂದ ಬೆಳಗ್ಗೆ 5 ರ ವರೆಗೆ ಕರ್ಫ್ಯೂ ಜಾರಿ ಮಾಡಿ ಸಿಎಂ ಬಿ.ಎಸ್​.ಯಡಿಯೂರಪ್ಪ ಆದೇಶಿಸಿದ್ದಾರೆ.

ಕರೊನಾದ ಹೊಸ ಪ್ರಬೇಧ ಹಾಗೂ ಎರಡನೇ ಅಲೆ ಆತಂಕ ಹಿನ್ನೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಜ.2ರವರೆಗೆ ರಾತ್ರಿ‌ ನೈಟ್ ಕರ್ಫ್ಯೂ ಜಾರಿಯಾಗಿದೆ. ಕೋವಿಡ್​ ಟೆಕ್ನಿಕಲ್​ ಟೀಂನ ಸಲಹೆಯಂತೆ ಕರ್ಫ್ಯೂ ಜಾರಿಯಲ್ಲಿದ್ದು, ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಂದ್​ ಆಗಲಿವೆ. 9 ದಿನಗಳ ಕಾಲ ಅಂದರೆ ಇಂದಿನಿಂದ ಜ.2ರ ವರೆಗೆ ನೈಟ್​ ಕರ್ಫ್ಯೂ ಜಾರಿಯಲ್ಲಿರಲಿದೆ.

ಇದನ್ನೂ ಓದಿ: ಭಾರತಕ್ಕೂ ಲಗ್ಗೆಯಿಟ್ಟ ಹೊಸ ಮಾದರಿಯ ಕೊರೋನಾ!

ಈ ಸಮಯದಲ್ಲಿ ವ್ಯಾಪಾರ-ವಹಿವಾಟುಗಳು , ಬಸ್ ಸಂಚಾರ, ಪಬ್ -ಬಾರ್ ಮುಂತಾದವುಗಳು ಬಂದ್ ಆಗಿರುತ್ತವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಇದರಿಂದ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ತಡೆ ಬಿದ್ದಿದೆ.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಬ್ರಿಟನ್ ನಿಂದ ಬರುವವರಿಗೆ ಕಡ್ಡಾಯ ಪರೀಕ್ಷೆ :

ಬ್ರಿಟನ್ ನಿಂದರಾಜ್ಯಕ್ಕೆ ಆಗಮಿಸುತ್ತಿರುವವರಿಗೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಇಂಗ್ಲೆಂಡ್ ನಿಂದ ಬಂದವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೋವಿಡ್ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇದೇ ವೇಳೆ ಸಿಎಂ ಬಿಎಸ್ ವೈ ತಿಳಿಸಿದ್ದಾರೆ.

ಅಲಿಗಢ ಮುಸ್ಲಿಂ ವಿವಿ ಮಿನಿ ಭಾರತವಿದ್ದಂತೆ| ಮುಸ್ಲಿಂ ಮಹಿಳೆಯರ ಸಬಲೀಕರಣ ನಮ್ಮ ಆದ್ಯತೆ : ಪ್ರಧಾನಿ ಮೋದಿ

LEAVE A REPLY

Please enter your comment!
Please enter your name here