ಬೆಂಗಳೂರು: ರಾಜಕೀಯ ಬೆಳವಣಿಗೆಗಳನ್ನು ಆಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದು ಎಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಪಕ್ಷ ನನಗೆ ಮಾತೃ ಸಮಾನ, ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ ಎಂದು ಅವರು ಬರೆದುಕೊಂಡಿದ್ದಾರೆ.
ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು.
ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ— B.S. Yediyurappa (@BSYBJP) July 21, 2021
ಕರ್ನಾಟಕ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಇಂದು (ಜುಲೈ 21) ಬಹಳಷ್ಟು ಬೆಳವಣಿಗೆಗಳು ರಾಜಕೀಯ ವಲಯದಲ್ಲಿ ನಡೆದಿದ್ದವು. ವಿವಿಧ ಪಕ್ಷಗಳ ರಾಜಕೀಯ ನಾಯಕರು, ವೀರಶೈವ ಲಿಂಗಾಯತ ಸಹಿತ ವಿವಿಧ ಸಮುದಾಯದ ಸ್ವಾಮೀಜಿಗಳು, ಮಠಾಧೀಶರು ಯಡಿಯೂರಪ್ಪ ಪರ- ವಿರೋಧ ಹೇಳಿಕೆ ನೀಡಿದ್ದರು. ಹಲವರು ಯಡಿಯೂರಪ್ಪರನ್ನು ಭೇಟಿಯಾಗಿ ನೇರ ಬೆಂಬಲ ಸೂಚಿಸಿದ್ದರು. ಎಲ್ಲಾ ಘಟನೆಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಳನ್ನು ವಾಟ್ಸಾಪ್ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ
ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ
ಬೆಂಗಳೂರಿನಲ್ಲಿ ಇಂದು (ಜುಲೈ 21) ನಡೆದ ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ ಎಂದು ಹೇಳಿರುವುದು ತಿಳಿದುಬಂದಿದೆ. ನಿಮ್ಮೆಲ್ಲರ ಆಶೀರ್ವಾದ ಇರುವುದರಿಂದ ನಾನು ಪುಣ್ಯಶಾಲಿ. ನನಗೆ ಇನ್ನೂ ರಾಜೀನಾಮೆ ಕೊಡಿ ಎಂದು ಸೂಚನೆ ನೀಡಿಲ್ಲ. ಯಾವ ಕಾರಣವನ್ನೂ ಕೊಟ್ಟಿಲ್ಲ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.