ಬಿಜೆಪಿ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ: ಮುಖ್ಯಮಂತ್ರಿ ಯಡಿಯೂರಪ್ಪ

0
94
Tap to know MORE!

ಬೆಂಗಳೂರು: ಬಿಜೆಪಿ ಹೈಕಮಾಂಡ್ ನನ್ನ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದೆ. ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ, ಅಲ್ಲಿಯವರೆಗೂ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ, ತಕ್ಷಣ ರಾಜೀನಾಮೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಜೀನಾಮೆ ನೀಡಿ ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಪರ್ಯಾಯ ನಾಯಕ ಇಲ್ಲವೆಂಬ ಮಾತನ್ನು ನಾನು ಒಪ್ಪಲ್ಲ. ದೇಶ, ರಾಜ್ಯದಲ್ಲಿ ಪರ್ಯಾಯ ನಾಯಕರು ಇರುತ್ತಾರೆ ಎಂದು ಬಿಎಸ್​ವೈ ಹೇಳಿದರು.

KSRTC ಹೆಸರು ಕೇರಳ ಪಾಲು, ವಾಸ್ತವಕ್ಕೆ ದೂರವಾದ ಸಂಗತಿ: ಕೆಎಸ್‌ಆರ್‌ಟಿಸಿ ಸ್ಪಷ್ಟನೆ

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಕೆಲ ಸಚಿವರಿಂದ ನಾಯಕತ್ವ ಬದಲಾವಣೆ ಕೆಲಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು ನಾನು ಯಾರ ಬಗ್ಗೆಯೂ ಟೀಕೆ ಟಿಪ್ಪಣಿ ಮಾಡುವುದಿಲ್ಲ. ನನ್ನ ಮೇಲೆ ಹೈಕಮಾಂಡ್‌ಗೆ ವಿಶ್ವಾಸವಿರುವವರೆಗೆ ಇರುತ್ತೇನೆ. ರಾಜ್ಯದ ಮುಖ್ಯಮಂತ್ರಿಯಾಗಿ ನಾನು ಮುಂದುವರಿಯುತ್ತೇನೆ. ಯಡಿಯೂರಪ್ಪ ನೀವು ಬೇಡ ಅಂದ್ರೆ ರಾಜೀನಾಮೆ ಕೊಡುತ್ತೇನೆ. ರಾಜೀನಾಮೆ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

LEAVE A REPLY

Please enter your comment!
Please enter your name here