ಮುಂದಿನ ಚುನಾವಣೆವರೆಗೆ ಯಡಿಯೂರಪ್ಪನವರೇ ಸಿಎಂ : ನಳಿನ್ ಕುಮಾರ್

0
166
Tap to know MORE!

ಬೆಂಗಳೂರು: ಉತ್ತರ ಕರ್ನಾಟಕ ಭಾಗದವರಿಗೆ ಸಿಎಂ ಸ್ಥಾನ ಸಿಗಬೇಕು ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, 2023ರ ವರೆಗೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಎಲ್ಲ ವಿವಾದಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ ಕಟೀಲು ತೆರೆ ಎಳೆದಿದ್ದಾರೆ.

2023ರ ಸಾರ್ವತ್ರಿಕ ಚುನಾವಣೆಯವರೆಗೂ ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಏನೂ ಆಗುವುದಿಲ್ಲ. ಬಿಎಸ್‌ವೈ ಅವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ನಳಿನ್‌ ಕುಮಾರ್‌ ಕಟೀಲು ಸ್ಪಷ್ಟವಾಗಿ ಹೇಳಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದೂ ತಿಳಿಸಿದ್ದಾರೆ.

ಇದಕ್ಕೆ ಮುನ್ನ ವಿಜಯಪುರದಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌, ಬಿ.ಎಸ್‌. ಯಡಿಯೂರಪ್ಪ ಅವರು ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂಬ ಬಾಂಬ್‌ ಸಿಡಿಸಿದ್ದರು. ಪಕ್ಷದ ವರಿಷ್ಠಗೂ ಬಿಎಸ್‌ವೈ ಬೇಕಾಗಿಲ್ಲ. ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ ಎಂದಿದ್ದರು.

ಇದು ಬಿಜೆಪಿ ನಾಯಕರ ಆಕ್ರೋಶಕ್ಕೂ ಕಾರಣವಾಗಿತ್ತು. ಇದರ ನಡುವೆಯೇ ಸಿಎಂ ಯಡಿಯೂರಪ್ಪ ಅವರು ಯತ್ನಾಳರನ್ನು ಮನೆಗೆ ಕರೆಸಿ ಮಾತನಾಡುವುದಾಗಿ ಹೇಳಿ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ. ಬಿಎಸ್‌ವೈ ನಮ್ಮ ಸರ್ವಾನುಮತದ ನಾಯಕರಾಗಿದ್ದು, ಯಾವುದೇ ಕಾರಣಕ್ಕೂ ಬದಲಾವಣೆ ಸಾಧ್ಯವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

LEAVE A REPLY

Please enter your comment!
Please enter your name here