ನಾವು ದೇಹದ ರಕ್ಷಣೆಗೂ ಸಮಾನ ಪ್ರಾಶಸ್ತ್ಯ ನೀಡಬೇಕು : ಯಾದವ್ ದೇವಾಡಿಗ

0
179
Tap to know MORE!

ಹಳೆಯಂಗಡಿ: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಯುವತಿ ಮತ್ತು ಮಹಿಳಾ ಮಂಡಲ (ರಿ) ಹಳೆಯಂಗಡಿ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಹಳೆಯಂಗಡಿ ಇವರ ಜಂಟಿ ಆಶ್ರಯದಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ಮಾಹಿತಿ ಕಾರ್ಯಾಗಾರ ಕಾರ್ಯಕ್ರಮವು ಯುವತಿ ಮತ್ತು ಮಹಿಳಾ ಮಂಡಲದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಲಯನ್ ಯಾದವ್ ದೇವಾಡಿಗ ಇವರು ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದೈನಂದಿನ ಬದುಕಿನಲ್ಲಿ ನಮ್ಮ ಆಚಾರ ವಿಚಾರ ಆಹಾರ-ವಿಹಾರ ಇವುಗಳ ಬಗ್ಗೆ ಹೆಚ್ಚಿನ ಗಮನವನ್ನು ಕೊಟ್ಟು ಧನಾತ್ಮಕ ಚಿಂತನೆಯೊಂದಿಗೆ ಬದುಕುವುದು, ದೇಹದ ರಕ್ಷಣೆಗೆ ನಾವು ಮಾಡಬಹುದಾದಂತಹ ಅತ್ಯಂತ ಅವಶ್ಯಕ ಎಂದು ಈ ಕಾರ್ಯಕ್ರಮದ ಮಹತ್ವವನ್ನು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.

ಹಳೆಯಂಗಡಿ : ಯುವಕ ಮಂಡಲದಲ್ಲಿ “ಪೇಪರ್ ಕ್ರಾಫ್ಟ್ ಕಾರ್ಯಾಗಾರ”

ಲಯನ್ ಮೋಹನ್ ಸುವರ್ಣ ಮಾಜಿ ವಲಯ ಅಧ್ಯಕ್ಷರು ಇವರು ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಲಿಯೋ ಕ್ಲಬ್ ಅಧ್ಯಕ್ಷರು ಲಿಯೋ ಚಿರಾಗ್ D. ಕೋಟ್ಯಾನ್, ಲಯನ್ ಕ್ಲಬ್ ಕಾರ್ಯದರ್ಶಿ ಲಯನ್ ರಶ್ಮಿ ಹಾಗೂ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಧ್ಯಕ್ಷ ಶ್ರೀ ಯತೀಶ್ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಪಡೆಯಲು “ಸುದ್ದಿವಾಣಿ” ವಾಟ್ಸಾಪ್ ಗುಂಪಿಗೆ ಸೇರಿ – ಸುದ್ದಿವಾಣಿ ಓದುಗರ ಬಳಗ

ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಲಯನ್ ಡಾ|ನಂದಿನಿ ಇವರು ಸ್ತನದ ಕ್ಯಾನ್ಸರ್ ರೋಗವು ನಮ್ಮ ಊರಿನಲ್ಲಿ ಆಸುಪಾಸಿನಲ್ಲಿ ತುಂಬಾ ಹೆಚ್ಚುತ್ತಿದ್ದು , ಮಹಿಳೆಯರಲ್ಲಿ ಇದರ ಬಗ್ಗೆ ಜಾಗೃತಿ ಮತ್ತು ಸ್ವಯಂ ಸ್ತನ ಪರೀಕ್ಷೆ ಮಾಡಿ ಏನಾದರೂ ವ್ಯತ್ಯಾಸ ಕಂಡು ಬಂದಲ್ಲಿ ಅಂಜಿಕೆ ಹಾಗೂ ಮುಜುಗರ ಬಿಟ್ಟು ಆದಷ್ಟು ಬೇಗ ತಮ್ಮ ವೈದ್ಯರ ಸಲಹೆಯನ್ನು ಪಡೆಯುವುದು ಉತ್ತಮ ಎಂದು ಅವರು ಹೇಳಿದರು.

ಮಹಿಳಾ ಮಂಡಲದ ಸದಸ್ಯೆ ಶ್ರೀಮತಿ ಮಮತಾ ಎಂ ಪ್ರಭು ದೇವರ ಸ್ತುತಿಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ರೇಷ್ಮಾ ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಯುವತಿ ಮಂಡಲದ ಅಧ್ಯಕ್ಷೆ ಕುಮಾರಿ ದಿವ್ಯಶ್ರೀ ಕೋಟ್ಯಾನ್ ಧನ್ಯವಾದ ಅರ್ಪಿಸಿದರು.

ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಪ್ರೇಮಲತಾ ಯೋಗೀಶ್ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here